ಕೆಮ್ಮುತ್ತಿದ್ದ ಎರಡು ತಿಂಗಳ ಹೆಣ್ಣು ಮಗುವಿಗೆ ಬಿಸಿ ಕಬ್ಬಿಣದ ರಾಡ್‌ನಿಂದ ಬರೆ; ನಕಲಿ ವೈದ್ಯನ ಬಂಧನ
ಗುಜರಾತ್‌ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Published: 13th February 2023 07:34 AM | Last Updated: 13th February 2023 05:48 PM | A+A A-

ಪ್ರಾತಿನಿಧಿಕ ಚಿತ್ರ
ಪೋರಬಂದರ್: ಗುಜರಾತ್‌ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಆರೋಪಿಯನ್ನು ಭಾನುವಾರ ಬಂಧಿಸಲಾಗಿದ್ದು, ಆತನ ಮತ್ತು ಮಗುವಿನ ತಾಯಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುರ್ಜೀತ್ ಮಹೇದು ತಿಳಿಸಿದ್ದಾರೆ.
ಮಗುವನ್ನು ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ಆಕೆಯನ್ನು ನಿಗಾದಲ್ಲಿರಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಒಂದು ವಾರದ ಹಿಂದೆ ಮಗು ಕೆಮ್ಮು ಮತ್ತು ಕಫದಿಂದ ಬಳಲುತ್ತಿದ್ದು, ಆಕೆಯ ಪೋಷಕರು ಮನೆಯಲ್ಲಿ ಸ್ಥಳೀಯ ನಾಟಿ ಚಿಕಿತ್ಸೆ ನೀಡಿಸಲು ಪ್ರಯತ್ನಿಸಿದರು. ಆದರೆ, ಆಕೆಗೆ ಪರಿಹಾರ ಸಿಕ್ಕಿಲ್ಲ. ನಂತರ, ಮಗುವಿನ ತಾಯಿ ಅವಳನ್ನು ದೇವರಾಜಭಾಯ್ ಕಟಾರಾ ಬಳಿಗೆ ಕರೆದೊಯ್ದಿದ್ದಾರೆ ಎಂದು ಮಹೇದು ಹೇಳಿದರು.
ಕತಾರಾ, ಮಗುವಿನ ಎದೆ ಮತ್ತು ಹೊಟ್ಟೆಯ ಮೇಲೆ ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದಿದ್ದಾರೆ. ಅದರಿಂದಲೂ ಪ್ರಯೋಜನವಾಗದಿದ್ದಾಗ, ಪೋಷಕರು ಮಗುವನ್ನು ಪೋರಬಂದರ್‌ನ ಭಾವಸಿಂಹಜಿ ಜನರಲ್ ಆಸ್ಪತ್ರೆಗೆ ಕರೆದೊಯ್ದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.
ಶಿಶುವಿನ ತಂದೆ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ ಸೆಕ್ಷನ್ 324 (ಸಾವಿಗೆ ಕಾರಣವಾಗುವ ಯಾವುದೇ ಸಾಧನದ ಮೂಲಕ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಕತಾರಾ ಮತ್ತು ಮಗುವಿನ ತಾಯಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೋರಬಂದರ್‌ನಲ್ಲಿರುವ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಮಗುವಿನ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.
ಫೆಬ್ರುವರಿ 9 ರಂದು ಉಸಿರಾಟದ ತೊಂದರೆಯೊಂದಿಗೆ ಮಗುವನ್ನು ಆಸ್ಪತ್ರೆಗೆ ಕರೆತರಲಾಯಿತು. ಆಕೆಯನ್ನು ಐಸಿಯುನಲ್ಲಿಟ್ಟು ಆಕ್ಸಿಜನ್ ಬೆಂಬಲ ನೀಡಲಾಗಿದ್ದು, ಚಿಕಿತ್ಸೆಯ ಸಮಯದಲ್ಲಿ, ಆಕೆಯ ಎದೆಯ ಮೇಲೆ ಬರೆ ಎಳೆದಿರುವುದನ್ನು ನಾವು ಕಂಡುಕೊಂಡಿದ್ದೇವೆ ಎಂದು ಜನರಲ್ ಆಸ್ಪತ್ರೆಯ ಡಾ ಜೈ ಬದಿಯಾನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಎರಡೂವರೆ ತಿಂಗಳ ಬಾಲಕಿಗೆ ಭೂತ ಬಿಡಿಸುವವನಿಂದ 50ಕ್ಕೂ ಹೆಚ್ಚು ಬಾರಿ ಬಿಸಿಯಾದ ಕಬ್ಬಿಣದ ರಾಡ್‌ನಿಂದ ಎಳೆಸಿಕೊಂಡ ನಂತರ ಮೃತಪಟ್ಟಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
3 ತಿಂಗಳ ಹೆಣ್ಣು ಮಗುವಿಗೆ ಕಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ಮತ್ತೊಂದು ಪ್ರಕರಣವೂ ಶಹದೋಲ್‌ನಲ್ಲಿ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.