ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನ ವೇಳೆ ಮುಂಬರುವ ರಾಜ್ಯಗಳ ವಿಧಾನಸಭೆ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಯಲ್ಲಿ ಅವರು ಗೆಲುವಿನ ಮಂತ್ರ ಪಠಿಸಿದ್ದಾರೆ.ಕಳೆದ 2 ತಿಂಗಳಲ್ಲಿ ಕರ್ನಾಟಕಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ. ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನೂ ನೋಡಿದ್ದೇನೆ ಕರ್ನಾಟಕದಲ್ಲಿ ಬಿಜೆಪಿಗೆ ಈ ಬಾರಿ ಸಂಪೂರ್ಣ ಜನಾದೇಶ ಸಿಗಲಿದೆ ಎಂದು ಹೇಳಿದರು. 

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಿರ್ಣಾಯಕವಾಗಿರುವ ಕ್ಷೇತ್ರಗಳಲ್ಲಿ ಮಂಡ್ಯ ಭಾಗ ಒಂದು. ಇದು ಒಕ್ಕಲಿಗ ಪ್ರಾಬಲ್ಯವಿರುವ ಇಷ್ಟು ವರ್ಷ ಜೆಡಿಎಸ್ ನಂತರ ಕಾಂಗ್ರೆಸ್ ಗೆ ಹೆಚ್ಚು ಮತದಾರರು ಒಲಿಯುವ ಕ್ಷೇತ್ರಗಳು. ಆದರೆ ಈ ಬಾರಿ ಮಂಡ್ಯದ ಜನರೂ ನಮ್ಮನ್ನು ಒಪ್ಪಿದ್ದಾರೆ ಎಂದಿದ್ದಾರೆ ಅಮಿತ್ ಶಾ.

ಮಂಡ್ಯ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನು ಮಾಡುತ್ತಿರುವ ಹಿನ್ನೆಲೆ ನಮಗೆ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.

ಬಿಜೆಪಿಯು ಮುಂಬರುವ ನಾಲ್ಕು ರಾಜ್ಯಗಳಾದ ರಾಜಸ್ತಾನ, ಕರ್ನಾಟಕ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಗಢಗಳಲ್ಲಿ ಬಹುಮತ ಪಡೆದು ಅಧಿಕಾರ ಹೊಂದಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com