ಪುಲ್ವಾಮಾ ದಾಳಿಗೆ 4 ವರ್ಷ: ವೀರ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಿದ ಪ್ರಧಾನಿ ಮೋದಿ ಹಾಗೂ ಗಣ್ಯರು

2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಜೈಶ್ ಇ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಉಗ್ರಗಾಮಿ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. 
ಪ್ರಧಾನಿ ನರೇಂದ್ರ ಮೋದಿ-ಅಮಿತ್ ಶಾ(ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ-ಅಮಿತ್ ಶಾ(ಸಂಗ್ರಹ ಚಿತ್ರ)

ನವದೆಹಲಿ:2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಜೈಶ್ ಇ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಉಗ್ರಗಾಮಿ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. 

ಇಂದು ಆ ಕರಾಳ ದಿನವನ್ನು ದೇಶದ ನಾಗರಿಕರು, ರಾಜಕೀಯ ವ್ಯಕ್ತಿಗಳು, ಗಣ್ಯರು ಸ್ಮರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಪುಲ್ವಾಮಾದಲ್ಲಿ 4 ವರ್ಷಗಳ ಹಿಂದೆ ಹುತಾತ್ಮರಾದ ನಮ್ಮ ಯೋಧರನ್ನು ಸ್ಮರಿಸಿಕೊಳ್ಳುತ್ತೇವೆ. ಯೋಧರ ವೀರ ತ್ಯಾಗ, ಬಲಿದಾನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಯೋಧರ ಧೈರ್ಯ, ಸಾಹಸಗಳು ಬಲಿಷ್ಠ, ಅಭಿವೃದ್ಧಿಶೀಲ ಭಾರತವನ್ನು ಸ್ಮರಿಸಲು ನಮಗೆ ಉತ್ತೇಜನ ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

2019 ರ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಯೋಧರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ರಾಷ್ಟ್ರವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಶೌರ್ಯ ಮತ್ತು ಅದಮ್ಯ ಧೈರ್ಯ ಯಾವಾಗಲೂ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com