ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: 8 ಮಂದಿಗೆ ಮಧ್ಯಂತರ ಜಾಮೀನು

ಲಖಿಂಪುರ ಖೇರಿ ಹಿಂಸಾಚಾರದ ಎಂಟು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಮಧ್ಯಂತರ ಜಾಮೀನು ನೀಡಿದೆ.
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ

ಲಖನೌ: ಲಖಿಂಪುರ ಖೇರಿ ಹಿಂಸಾಚಾರದ ಎಂಟು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಮಧ್ಯಂತರ ಜಾಮೀನು ನೀಡಿದೆ. 

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಕಾರು ಹತ್ತಿಸಿ ನಾಲ್ವರು ರೈತರನ್ನು ಕೊಂದಿದ್ದಕ್ಕಾಗಿ ಎಲ್ಲಾ ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

2023ರ ಜನವರಿ 25ರಂದು ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಎಂಟು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ್ದು ಅವರು ಹೊರಗಿದ್ದಾರೆ.

ಎಂಟು ವಾರಗಳ ಮಧ್ಯಂತರ ಜಾಮೀನಿನ ಅವಧಿಯಲ್ಲಿ ಮಿಶ್ರಾ ಅವರು ಉತ್ತರ ಪ್ರದೇಶ ಅಥವಾ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಇರಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇನ್ನು ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ಮತ್ತು ಚಾಲಕನನ್ನು ಹತ್ಯೆ ಮಾಡಿದ್ದ ನಾಲ್ವರು ರೈತರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಲಹಾಬಾದ್ ಹೈಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಪಡೆದ ಎಂಟು ಆರೋಪಿಗಳಲ್ಲಿ ನಂದನ್ ಸಿಂಗ್ ಬಿಶ್ತ್, ಅಂಕಿತ್ ದಾಸ್, ಲತೀಫ್ ಅಲಿಯಾಸ್ ಕಾಳೆ, ಸತ್ಯಂ ತ್ರಿಪಾಠಿ ಅಲಿಯಾಸ್ ಸತ್ಯ ಪ್ರಕಾಶ್ ತ್ರಿಪಾಠಿ, ಶೇಖರ್ ಭಾರತಿ, ಆಶಿಶ್ ಪಾಂಡೆ, ರಿಂಕೂ ರಾಣಾ ಮತ್ತು ಸುಮಿತ್ ಜೈಸ್ವಾಲ್ ಸೇರಿದ್ದಾರೆ. ಅಂಕಿತ್ ದಾಸ್ ಮಾಜಿ ಕೇಂದ್ರ ಸಚಿವ ಅಖಿಲೇಶ್ ದಾಸ್ ಅವರ ಸೋದರಳಿಯ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com