ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ: 4ನೇ ಆರೋಪಿ ಬಂಧಿಸಿದ ಪೊಲೀಸರು

ಸೆಲ್ಫಿ ವಿಚಾರವಾಗಿ ನಡೆದ ವಾಗ್ಯುದ್ದ ಸಂದರ್ಭದಲ್ಲಿ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ ನಡೆಸಿದ ನಾಲ್ಕನೇ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪೃಥ್ವಿ ಶಾ ಮೇಲೆ ದಾಳಿ ಘಟನೆ ಚಿತ್ರ
ಪೃಥ್ವಿ ಶಾ ಮೇಲೆ ದಾಳಿ ಘಟನೆ ಚಿತ್ರ

ಮುಂಬೈ: ಸೆಲ್ಫಿ ವಿಚಾರವಾಗಿ ನಡೆದ ವಾಗ್ಯುದ್ದ ಸಂದರ್ಭದಲ್ಲಿ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ ನಡೆಸಿದ ನಾಲ್ಕನೇ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬುಧವಾರ ಮುಂಜಾನೆ ಲಕ್ಸುರಿ ಹೋಟೆಲ್ ವೊಂದರ ಮುಂಭಾಗ ಸೆಲ್ಫಿ ಗೆ ನಿರಾಕರಿಸಿದ ನಂತರ ಪೃಥ್ವಿ ಶಾ ಮೇಲೆ ಹಲ್ಲೆ ನಡೆಸಲಾಗಿತ್ತು. ಅಲ್ಲದೇ,  ಬೇಸ್ ಬಾಲ್ ಬ್ಯಾಟ್ ನಿಂದ ಅವರ ಕಾರಿನ ಮೇಲೆ ದಾಳಿ ನಡೆದಿತ್ತು.

ಈ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಭಾವಿಯಾಗಿರುವ ಸಪ್ತಾ ಗಿಲ್ ಅವರನ್ನು ಗುರುವಾರ ಸಂಜೆ ಬಂಧಿಸಲಾಗಿತ್ತು. ಆಕೆಯ ಸ್ನೇಹಿತ ಶೋಬಿತ್ ಠಾಕೂರ್ ನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ ಇಬ್ಬರನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಇನ್ನೂ ನಾಲ್ವರ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪೃಥ್ವಿ ಶಾ ಸ್ನೇಹಿತ ಅಶಿಶ್ ಯಾದವ್ ನೀಡಿದ ದೂರಿನ ಅನ್ವಯ ಎಂಟು ಜನರ ವಿರುದ್ಧ  ಒಶಿವಾರ ಪೊಲೀಸರು ಹಿಂಸಾಚಾರ, ಹಲ್ಲೆ, ಮತ್ತಿತರ ಆರೋಪಗಳ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಠಾಕೂರ್ ಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com