ಭೂತ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಂತ್ರವಾದಿ
ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಭೂತ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿಯ ಮೇಲೆ ತಂತ್ರಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 19th February 2023 02:13 PM | Last Updated: 19th February 2023 02:13 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಭೂತ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿಯ ಮೇಲೆ ತಂತ್ರಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಪ್ರಕಾರ, ಸಂತ್ರಸ್ತೆ ಅನಾರೋಗ್ಯದಿಂದ ಬಳಲುತ್ತಿದ್ದಳು ಮತ್ತು ಆಕೆಯ ತಾಯಿ ಅವಳನ್ನು ಚಿಕಿತ್ಸೆಗಾಗಿ ಆರೋಪಿಯ ಬಳಿಗೆ ಕರೆದೊಯ್ದಿದ್ದರು.
ತನ್ನ ಮಗಳು ಎರಡು ತಿಂಗಳ ಗರ್ಭಿಣಿ ಎಂದು ಆಕೆಯ ತಾಯಿಗೆ ತಿಳಿದ ನಂತರ ಅವರು ಪೊಲೀಸರನ್ನು ಸಂಪರ್ಕಿಸಲು ನಿರ್ಧರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಬಾಬಾ ಹರಿದಾಸ್ ನಗರದಲ್ಲಿ ಪೊಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಆರೋಪಿಯು ಅಪ್ರಾಪ್ತ ಬಾಲಕಿ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾನೆ ಮತ್ತು ಗರ್ಭ ಧರಿಸುವಂತೆ ಮಾಡಿದ್ದಾನೆ. ಆರೋಪಿಯು ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ನಮ್ಮ ಹಲವು ತಂಡಗಳು ಶೋಧ ಕಾರ್ಯಾಚರಣೆ ಕೈಗೊಂಡಿವೆ' ಎಂದು ಅಧಿಕಾರಿ ಹೇಳಿದರು.