ಬಿಹಾರ: ಜೈಲು ತಪಾಸಣೆ ವೇಳೆ ಮೊಬೈಲ್ ನುಂಗಿದ ಕೈದಿ, ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲು

ಬಿಹಾರದ ಗೋಪಾಲ್‌ಗಂಜ್ ಜಿಲ್ಲಾ ಕಾರಾಗೃಹದಲ್ಲಿ ಖೈದಿಯೊಬ್ಬರು, ತಪಾಸಣೆ ವೇಳೆ ಗ್ಯಾಜೆಟ್ ಅನ್ನು ಜೈಲು ಅಧಿಕಾರಿಗಳು ಪತ್ತೆ ಮಾಡಬಹುದು ಎಂದು ಹೆದರಿ ಮೊಬೈಲ್ ಫೋನ್ ನುಂಗಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗೋಪಾಲ್‌ಗಂಜ್: ಬಿಹಾರದ ಗೋಪಾಲ್‌ಗಂಜ್ ಜಿಲ್ಲಾ ಕಾರಾಗೃಹದಲ್ಲಿ ಖೈದಿಯೊಬ್ಬರು, ತಪಾಸಣೆ ವೇಳೆ ಗ್ಯಾಜೆಟ್ ಅನ್ನು ಜೈಲು ಅಧಿಕಾರಿಗಳು ಪತ್ತೆ ಮಾಡಬಹುದು ಎಂದು ಹೆದರಿ ಮೊಬೈಲ್ ಫೋನ್ ನುಂಗಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಜೈಲು ತಪಾಸಣೆ ವೇಳೆ ಖೈಶರ್ ಅಲಿ ಎಂಬಾತ ಫೋನ್ ನುಂಗಿದ್ದ. ಆದರೆ, ಭಾನುವಾರ ಅಲಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ವಿಷಯ ಬೆಳಕಿಗೆ ಬಂದಿದೆ.

ಈ ವೇಳೆ, ಕೈದಿಯು ಜೈಲು ಅಧಿಕಾರಿಗಳಿಗೆ ನಡೆದಿದ್ದನ್ನು ವಿವರಿಸಿದ್ದಾರೆ. ಕೂಡಲೇ ಅವರನ್ನು ಗೋಪಾಲ್‌ಗಂಜ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಎಂದು ಗೋಪಾಲ್‌ಗಂಜ್ ಜೈಲು ಅಧೀಕ್ಷಕ ಮನೋಜ್ ಕುಮಾರ್ ಸೋಮವಾರ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ದೇಶದ ಜೈಲುಗಳಲ್ಲಿ ಕೈದಿಗಳು ಸೆಲ್‌ಫೋನ್ ಬಳಸುವುದನ್ನು ನಿಷೇಧಿಸಲಾಗಿದೆ.

ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ವೈದ್ಯ ಸಲಾಮ್ ಸಿದ್ದಿಕಿ ಮಾತನಾಡಿ, ‘ಕೈದಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಹೊಟ್ಟೆಯ ಎಕ್ಸ್ ರೇ ತೆಗೆಯಲಾಗಿದೆ. ತಪಾಸಣೆ ವೇಳೆ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ಕಂಡುಬಂದಿದೆ' ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಿಂದ ವೈದ್ಯಕೀಯ ಮಂಡಳಿಯನ್ನು ರಚಿಸಲಾಗಿದೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ವ್ಯಕ್ತಿಯನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಬೈಲ್ ಫೋನ್ ಅನ್ನು ಈಗ ಪಾಟ್ನಾ ವೈದ್ಯಕೀಯ ಕಾಲೇಜು ವೈದ್ಯರು ಹೊರ ತೆಗೆಯುತ್ತಾರೆ ಎಂದರು.

ಅಲಿ ಅವರನ್ನು 2020ರ ಜನವರಿ 17 ರಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ (ಎನ್‌ಡಿಪಿಎಸ್ ಆಕ್ಟ್) ಅಡಿಯಲ್ಲಿ ಗೋಪಾಲ್‌ಗಂಜ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಅವರು ಜೈಲಿನಲ್ಲಿದ್ದಾರೆ.

ಮಾರ್ಚ್ 2021ರಲ್ಲಿ ರಾಜ್ಯದಾದ್ಯಂತ ಜೈಲುಗಳಲ್ಲಿ ನಡೆಸಿದ ದಾಳಿಯಲ್ಲಿ ಸುಮಾರು 35 ಸೆಲ್‌ಫೋನ್‌ಗಳು, ಏಳು ಸಿಮ್ ಕಾರ್ಡ್‌ಗಳು ಮತ್ತು 17 ಸೆಲ್‌ಫೋನ್ ಚಾರ್ಜರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜ್ಯದ ಕತಿಹಾರ್, ಬಕ್ಸರ್, ಗೋಪಾಲ್‌ಗಂಜ್, ನಳಂದಾ, ಹಾಜಿಪುರ, ಅರಾ, ಜೆಹಾನಾಬಾದ್ ಮತ್ತು ಇತರ ಕೆಲವು ಜೈಲುಗಳ ಮೇಲೆ ದಾಳಿ ನಡೆಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com