ಗುರುಗ್ರಾಮ್‌: 11ನೇ ತರಗತಿ ವಿದ್ಯಾರ್ಥಿನಿ ಮೇಲೆ ಹೆತ್ತ ತಂದೆ, ಸಹೋದರನಿಂದ ಲೈಂಗಿಕ ದೌರ್ಜನ್ಯ

17 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಮತ್ತು ಸಹೋದರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಗುರುಗ್ರಾಮ್: 17 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಮತ್ತು ಸಹೋದರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

11ನೇ ತರಗತಿಯ ವಿದ್ಯಾರ್ಥಿನಿಯು ತನ್ನ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಈ ವಿಷಯ ತಿಳಿಸಿದ್ದು,  ಅವರು ಬಾಲಕಿಯೊಂದಿಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹೆತ್ತ ತಂದೆ ಮತ್ತು ಸಹೋದರ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ತಿಳಿಸಿದ್ದಾಳೆ. ಅಲ್ಲದೆ ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ವಿದ್ದಾರ್ಥಿನಿಗೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸುಮಾರು ನಾಲ್ಕು ಗಂಟೆಗಳ ಕಾಲ ಸಂತ್ರಸ್ತೆಗೆ ಕೌನ್ಸೆಲಿಂಗ್ ಮತ್ತು ವಿಚಾರಣೆ ನಡೆಸಿದ ನಂತರ, ಖೇರ್ಕಿ ದೌಲಾ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ ಮತ್ತು ಸಹೋದರನ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ನಾವು ಸತ್ಯವನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com