ವಿಪಕ್ಷಗಳ ಒಕ್ಕೂಟವನ್ನು ಕಾಂಗ್ರೆಸ್ ಮುನ್ನಡೆಸಲಿ: ಶರದ್ ಪವಾರ್

ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 2024 ರ ಚುನಾವಣೆ ಬಳಿಕ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಎನ್ ಸಿಪಿ ಮುಖಂಡ ಶರದ್ ಪವಾರ್....
ಶರದ್ ಪವಾರ್
ಶರದ್ ಪವಾರ್

ಮುಂಬೈ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 2024 ರ ಚುನಾವಣೆ ಬಳಿಕ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಎನ್ ಸಿಪಿ ಮುಖಂಡ ಶರದ್ ಪವಾರ್, ತಮ್ಮ ಪಕ್ಷ ಕಾಂಗ್ರೆಸ್ ನಾಯಕತ್ವವನ್ನು ಒಪ್ಪಿಕೊಳ್ಳುತ್ತದೆ ಎಂದು ಹೇಳಿದ್ದಾರೆ. 

ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು ವಿಪಕ್ಷಗಳ ಪಡೆಯನ್ನು ಆ ಪಕ್ಷವೇ ಮುನ್ನಡೆಸಲಿ, ನಾವು ಕಾಂಗ್ರೆಸ್ ನಾಯಕತ್ವವನ್ನು ಒಪ್ಪಿಕೊಳ್ಳುತ್ತೇವೆ ಎಂದು ಮುಂಬೈ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶರದ್ ಪವಾರ್ ತಿಳಿಸಿದ್ದಾರೆ.
 
ಮಂಗಳವಾರ ಕಾಂಗ್ರೆಸ್ ಅಧ್ಯಕ್ಷರು 2024 ರ ಚುನಾವಣೆ ಬಳಿಕ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಹೇಳಿದ್ದರು.

ಪ್ರಜಾಪ್ರಭುತ್ವ, ಸಂವಿಧಾನವನ್ನು ಎತ್ತಿಹಿಡಿಯುವ ಮಾತನ್ನಾಡುವ ಬಿಜೆಪಿ, ಚುನಾಯಿತ ಸರ್ಕಾರವನ್ನು ಉರುಳಿಸುವ, ಪ್ರಜಾಪ್ರಭುತ್ವ ವಿರೋಧಿ ತಂತ್ರಗಳನ್ನು ಹೂಡುತ್ತದೆ ಎಂದು ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

100 ಮೋದಿ, ಅಮಿತ್ ಶಾಗಳು ಬರಲಿ, ನಾವು ಪ್ರಜಾಪ್ರಭುತ್ವದ ಪಥದಿಂದ ಸಂವಿಧಾನದ ಮೌಲ್ಯಗಳಿಂದ ದೂರ ಸರಿಯುವುದಿಲ್ಲ ಎಂದು ಖರ್ಗೆ ಹೇಳಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com