ಒಂದೆಡೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ವಿರೋಧ ಪಕ್ಷಗಳ ಒಗ್ಗಟ್ಟಿನ ಮಂತ್ರ: ಮತ್ತೊಂದೆಡೆ ಟಿಎಂಸಿ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ

2024 ರಲ್ಲಿ ಕಾಂಗ್ರೆಸ್ ಪಕ್ಷ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಮತ್ತು ಮೈತ್ರಿ ಮಾಡಿಕೊಳ್ಳಲು ಇತರ ಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊನ್ನೆಯಷ್ಟೇ ಹೇಳಿದ್ದರು.
ದೆಹಲಿಯಲ್ಲಿ ನಿನ್ನೆ ನಡೆದ ಐಎನ್‌ಟಿಯುಸಿಯ 33ನೇ ಸರ್ವಸದಸ್ಯರನ್ನು ಉದ್ದೇಶಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು
ದೆಹಲಿಯಲ್ಲಿ ನಿನ್ನೆ ನಡೆದ ಐಎನ್‌ಟಿಯುಸಿಯ 33ನೇ ಸರ್ವಸದಸ್ಯರನ್ನು ಉದ್ದೇಶಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು

ನವದೆಹಲಿ: 2024 ರಲ್ಲಿ ಕಾಂಗ್ರೆಸ್ ಪಕ್ಷ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಮತ್ತು ಮೈತ್ರಿ ಮಾಡಿಕೊಳ್ಳಲು ಇತರ ಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊನ್ನೆಯಷ್ಟೇ ಹೇಳಿದ್ದರು.

ಮಲ್ಲಿಕಾರ್ಜುನ ಖರ್ಗೆಯವರು ಹೇಳಿಕೆ ನೀಡಿರುವ ಮಧ್ಯೆಯೇ ತೃಣಮೂಲ ಕಾಂಗ್ರೆಸ್ (TMC) ಮತ್ತು ರಾಹುಲ್ ಗಾಂಧಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ನಿನ್ನೆ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಮೇಘಾಲಯದಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಟಿಎಂಸಿ ತೆರೆಮರೆಯಲ್ಲಿ ಸಹಾಯ ಮಾಡುತ್ತಿದೆ ಎಂದಿದ್ದಾರೆ. ಇದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಕೆರಳಿಸಿದೆ. 

ಪಶ್ಚಿಮ ಬಂಗಾಳದಲ್ಲಿ "ಹಿಂಸಾಚಾರ ಮತ್ತು ಹಗರಣಗಳು ಸಾಕಷ್ಟು ನಡೆಯುತ್ತಿವೆ ಎಂದು ಸಹ ಹೇಳಿದರು. ಬಿಜೆಪಿಯು ತನಗೆ ಎಲ್ಲವೂ ತಿಳಿದಿದೆ ಎಂದು ಭಾವಿಸುತ್ತದೆ ಎಂದು ಸಹ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. “ಟಿಎಂಸಿ ಇತಿಹಾಸ, ಪಶ್ಚಿಮ ಬಂಗಾಳದಲ್ಲಿ ನಡೆಯುವ ಹಿಂಸಾಚಾರ ಮತ್ತು ಹಗರಣಗಳು ನಿಮಗೆ ತಿಳಿದಿದೆ. ಅವರ ಸಂಪ್ರದಾಯದ ಬಗ್ಗೆ ನಿಮಗೆ ಅರಿವಿದೆ. ಅವರು ಗೋವಾ ಚುನಾವಣೆಯಲ್ಲಿ  ಸಾಕಷ್ಟ ಹಣ ಖರ್ಚು ಮಾಡಿ ಬಿಜೆಪಿಗೆ ಸಹಾಯ ಮಾಡಿದರು. ಮೇಘಾಲಯದಲ್ಲಿ ಕೂಡ ಹೀಗೆಯೇ ಆಗುತ್ತಿದೆ ಎಂದು ಟೀಕಿಸಿದ್ದಾರೆ.

ಮೇಘಾಲಯ ಅಸೆಂಬ್ಲಿ ಚುನಾವಣೆ ಫೆಬ್ರವರಿ 27 ರಂದು ನಡೆಯಲಿವೆ. ರಾಹುಲ್ ಗಾಂಧಿ ಹೇಳಿಕೆಗೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ತಿರುಗೇಟು ನೀಡಿದರು, ಕಾಂಗ್ರೆಸ್‌ನ "ಅಪ್ರಸ್ತುತತೆ ಮತ್ತು ಅಸಮರ್ಥತೆ" ತಮ್ಮನ್ನು ಭ್ರಮನಿರಸನಕ್ಕೆ ತಳ್ಳಿದೆ ಎಂದು ಹೇಳಿದರು. ಬಂಗಾಳದ ಆಡಳಿತ ಪಕ್ಷದ ಮೇಲೆ ದಾಳಿ ಮಾಡುವ ಬದಲು ನಿಮ್ಮ ರಾಜಕೀಯವನ್ನು ಮರುಪರಿಶೀಲಿಸಬೇಕು ಎಂದು ಟ್ವೀಟ್ ಮಾಡಿ ಟೀಕಿಸಿದ್ದು. "ಜನರ ಪ್ರೀತಿಯೇ ನಮ್ಮನ್ನು ಪ್ರೇರೇಪಿಸುತ್ತದೆ" ಎಂದು ಎಂದು ಹೇಳಿದ್ದಾರೆ. 

ಮೊನ್ನೆ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 2024 ರ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕಲು ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಉಪಕ್ರಮವನ್ನು ತೆಗೆದುಕೊಳ್ಳುವಂತೆ ಕಾಂಗ್ರೆಸ್ ನ್ನು ಒತ್ತಾಯಿಸಿದ್ದರು. ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಫೆಬ್ರವರಿ 24 ರಿಂದ ಪ್ರಾರಂಭವಾಗುವ ಕಾಂಗ್ರೆಸ್ ಪಕ್ಷದ ಮೂರು ದಿನಗಳ ಪೂರ್ಣ ಪ್ರಮಾಣದ ಅಧಿವೇಶನಕ್ಕೆ ಮುಂಚಿತವಾಗಿ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com