ಸಂಜಯ್ ರಾವತ್ ವಿರುದ್ಧ 2ನೇ ಮಾನನಷ್ಟ ಮೊಕದ್ದಮೆ ದಾಖಲು
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಶಿವಸೇನಾ(ಯುಬಿಟಿ) ಮುಖಂಡ ಸಂಜಯ್ ರಾವತ್ ವಿರುದ್ಧ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮತ್ತೊಂದು...
Published: 24th February 2023 04:21 PM | Last Updated: 24th February 2023 04:21 PM | A+A A-

ಶಿವಸೇನೆ ನಾಯಕ ಸಂಜಯ್ ರಾವತ್
ಬೀಡ್: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಶಿವಸೇನಾ(ಯುಬಿಟಿ) ಮುಖಂಡ ಸಂಜಯ್ ರಾವತ್ ವಿರುದ್ಧ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಶಿವಸೇನೆಯ ಬೀಡ್ ಜಿಲ್ಲಾ ಘಟಕದ ಮುಖ್ಯಸ್ಥರು ಗುರುವಾರ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಸಿಎಂ ಏಕನಾಥ್ ಶಿಂಧೆ ಪುತ್ರನಿಂದ ಸುಪಾರಿ ಆರೋಪ, ರಾವತ್ ವಿರುದ್ಧ ಎಫ್ ಐಆರ್
ರಾವತ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡನೇ ಎಫ್‌ಐಆರ್ ಇದಾಗಿದೆ.
ಇದೇ ಹೇಳಿಕೆಗೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರ ವಿರುದ್ಧ ಥಾಣೆ ನಗರದ ಕಪುರಬಾವಡಿ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಮೊದಲ ಪ್ರಕರಣ ದಾಖಲಾಗಿತ್ತು.
ಬೀಡ್ ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ, ರಾಜ್ಯಸಭಾ ಸದಸ್ಯ ರಾವತ್ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್ 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500 ಮತ್ತು 501ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.