ಖರ್ಗೆಗೆ ಸಿಡಬ್ಲ್ಯುಸಿ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರ ನೀಡಿದ ಕಾಂಗ್ರೆಸ್ ಸ್ಟೀರಿಂಗ್ ಸಮಿತಿ
ಪಕ್ಷದ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರನ್ನು ನಾಮನಿರ್ದೇಶನ ಮಾಡುವ ಸಂಪೂರ್ಣ ಅಧಿಕಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲು ಕಾಂಗ್ರೆಸ್ ಸ್ಟೀರಿಂಗ್ ಸಮಿತಿ ಶುಕ್ರವಾರ....
Published: 24th February 2023 03:15 PM | Last Updated: 24th February 2023 05:09 PM | A+A A-

ಮಲ್ಲಿಕಾರ್ಜುನ ಖರ್ಗೆ
ನವರಾಜಪುರ: ಪಕ್ಷದ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರನ್ನು ನಾಮನಿರ್ದೇಶನ ಮಾಡುವ ಸಂಪೂರ್ಣ ಅಧಿಕಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲು ಕಾಂಗ್ರೆಸ್ ಸ್ಟೀರಿಂಗ್ ಸಮಿತಿ ಶುಕ್ರವಾರ ಸರ್ವಾನುಮತದ ನಿರ್ಧಾರ ತೆಗೆದುಕೊಂಡಿದೆ.
ಸ್ಟೀರಿಂಗ್ ಸಮಿತಿಯು ಸಿಡಬ್ಲ್ಯೂಸಿ ಚುನಾವಣೆಯ ಕುರಿತು ಮುಕ್ತವಾಗಿ ಚರ್ಚಿಸಿತು ಮತ್ತು ಸಭೆಯಲ್ಲಿ ಹಾಜರಿದ್ದ ಬಹುತೇಕ ಎಲ್ಲಾ 45 ಸದಸ್ಯರು, ಸಿಡಬ್ಲ್ಯುಸಿ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರವನ್ನು ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಲು ಸರ್ವಾನುಮತದಿಂದ ನಿರ್ಧರಿಸಿದರು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಹಲವಾರು ಸದಸ್ಯರು ಸಿಡಬ್ಲ್ಯೂಸಿಗೆ ಚುನಾವಣೆ ನಡೆಸುವ ಪರವಾಗಿ ಮತ್ತು ವಿರುದ್ಧವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು ಎಂದು ಜೈರಾಮ್ ರಮೇಶ್ ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ಸರ್ವಾನುಮತದ ನಿರ್ಧಾರವನ್ನು ಎಲ್ಲಾ ಎಐಸಿಸಿ ಮತ್ತು ಪಿಸಿಸಿ ಪ್ರತಿನಿಧಿಗಳು ಬೆಂಬಲಿಸುತ್ತಾರೆ ಎಂದು ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ಪಕ್ಷದ ಸಂವಿಧಾನದ 32 ನಿಯಮಗಳು ಮತ್ತು ನಿಬಂಧನೆಗಳಿಗೆ 16 ತಿದ್ದುಪಡಿಗಳನ್ನು ತರುವ ಬಗ್ಗೆಯೂ ಸ್ಟೀರಿಂಗ್ ಸಮಿತಿ ನಿರ್ಧರಿಸುತ್ತದೆ ಎಂದು ರಮೇಶ್ ಹೇಳಿದ್ದಾರೆ.