ಬಿಜೆಪಿ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ಒಡೆಯಲು ಯತ್ನಿಸುತ್ತಿದೆ: ಲಾಲು ಪ್ರಸಾದ್ ಯಾದವ್
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ಕೇಸರಿ ಪಕ್ಷ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಶನಿವಾರ
Published: 25th February 2023 05:42 PM | Last Updated: 25th February 2023 07:34 PM | A+A A-

ಲಾಲು ಪ್ರಸಾದ್ ಯಾದವ್
ಪೂರ್ಣೆ: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ಕೇಸರಿ ಪಕ್ಷ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಶನಿವಾರ ಆರೋಪಿಸಿದ್ದಾರೆ.
ದೇಶದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಲ್ಪಸಂಖ್ಯಾತರ ವಿರುದ್ಧವಾಗಿವೆ ಎಂದು ಆರ್ ಜೆಡಿ ಮುಖ್ಯಸ್ಥ ಕಿಡಿಕಾರಿದ್ದಾರೆ.
ಸಿಂಗಾಪುರದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಇತ್ತೀಚೆಗೆ ದೇಶಕ್ಕೆ ಮರಳಿದ ಲಾಲು, ಇಂದು ದೆಹಲಿಯಿಂದ ವರ್ಚುವಲ್ ಮೂಲಕ ಮಹಾ ಮೈತ್ರಿಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.
"ಬಿಜೆಪಿ ಮತ್ತು ಆರೆಸ್ಸೆಸ್ ದೇಶದ ಅಲ್ಪಸಂಖ್ಯಾತರು ಹಾಗೂ ಸಮಾಜದ ದುರ್ಬಲ ವರ್ಗಗಳ ವಿರುದ್ಧವಾಗಿದೆ... ನಾವು(ಮಹಾ ಮೈತ್ರಿ) 2024ರ ಲೋಕಸಭೆ ಮತ್ತು 2025ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇವೆ" ಎಂದು ಹೇಳಿದರು.
ಇದನ್ನು ಓದಿ: ಮಹಿಳೆಯರು, ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಬಿಜೆಪಿ ದ್ವೇಷದ ಬೆಂಕಿ ಹರಡುತ್ತಿದೆ: ಸೋನಿಯಾ ಗಾಂಧಿ
ಬಿಜೆಪಿ ಮತ್ತು ಆರೆಸ್ಸೆಸ್ ಎರಡೂ ಮೀಸಲಾತಿಗೆ ವಿರುದ್ಧವಾಗಿದ್ದು, ಸಂವಿಧಾನವನ್ನು ಬದಲಾಯಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಲಾಲು ಪ್ರಸಾದ್ ಆರೋಪಿಸಿದ್ದಾರೆ.
"ನಮ್ಮ ಹೋರಾಟ ಆರ್‌ಎಸ್‌ಎಸ್ ಸಿದ್ಧಾಂತದ ವಿರುದ್ಧವಾಗಿದೆ. ಬಿಜೆಪಿ, ಆರ್‌ಎಸ್‌ಎಸ್ ಸೂಚನೆಗಳನ್ನು ಪಾಲಿಸುತ್ತಿದೆ. ಬಿಹಾರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತುಹಾಕಲಾಗಿದೆ. ಇದೇ ರೀತಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಾಗುವುದು" ಎಂದು ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.