ನಿತೀಶ್ ಕುಮಾರ್ ಗೆ ಬಿಜೆಪಿ ಬಾಗಿಲು ಶಾಶ್ವತವಾಗಿ ಮುಚ್ಚಿದೆ: ಅಮಿತ್ ಶಾ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಯನ್ನು ಈಡೇರಿಸಿಕೊಳ್ಳಲು ಬಿಜೆಪಿಯನ್ನು ತ್ಯಜಿಸಿ, ಕಾಂಗ್ರೆಸ್ ಮತ್ತು ಆರ್‌ಜೆಡಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ...
ಅಮಿತ್ ಶಾ
ಅಮಿತ್ ಶಾ

ಲಾರಿಯಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಯನ್ನು ಈಡೇರಿಸಿಕೊಳ್ಳಲು ಬಿಜೆಪಿಯನ್ನು ತ್ಯಜಿಸಿ, ಕಾಂಗ್ರೆಸ್ ಮತ್ತು ಆರ್‌ಜೆಡಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಆರೋಪಿಸಿದ್ದಾರೆ.

ಪಶ್ಚಿಮ ಚಂಪಾರಣ್ ಜಿಲ್ಲೆಯ ಲೌರಿಯಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡಲು ಜೆಡಿಯು ವರಿಷ್ಠರು ಒಪ್ಪಿದ್ದಾರೆ ಮತ್ತು ಅವರು ಅದನ್ನು ಮಾಡುತ್ತಾರೆ ಎಂಬುದನ್ನು  ಘೋಷಿಸಬೇಕು ಎಂದಿದ್ದಾರೆ.

ಬಾಲ್ಮೀಕಿ ನಗರ ಲೋಕಸಭಾ ಕ್ಷೇತ್ರದಲ್ಲಿ ಮಾತನಾಡಿದ ಅಮಿತ್ ಶಾ, ನಿತೀಶ್ ಕುಮಾರ್ ಗೆ ಬಿಜೆಪಿ ಬಾಗಿಲು ಶಾಶ್ವತವಾಗಿ ಮುಚ್ಚಿದೆ. ಅವರು ಬಿಹಾರವನ್ನು 'ಜಂಗಲ್ ರಾಜ್' ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜೈ ಪ್ರಕಾಶ್ ನಾರಾಯಣ್ ಅವರ ಕಾಲದಿಂದಲೂ ಕಾಂಗ್ರೆಸ್ ಮತ್ತು ಜಂಗಲ್ ರಾಜ್ ವಿರುದ್ಧ ಹೋರಾಡಿದ ನಿತೀಶ್ ಕುಮಾರ್ ಅವರು ಈಗ ಜಂಗಲ್ ರಾಜ್‌ನ ಪ್ರವರ್ತಕ ಲಾಲು ಪ್ರಸಾದ್ ಯಾದವ್ ಅವರ ಮಡಿಲಲ್ಲಿ ಮತ್ತು ಸೋನಿಯಾ ಗಾಂಧಿ ಅವರ ಪಾದದ ಕೆಳಗೆ ಕುಳಿತಿದ್ದಾರೆ ಎಂದು ಟೀಕಿಸಿದರು.

'ವಿಕಾಸವಾದಿ'(ಅಭಿವೃದ್ಧಿ ಪರ) ಆಗಿದ್ದ ಬಿಹಾರ ಸಿಎಂ ಈಗ ತಮ್ಮ ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಗಾಗಿ 'ಅವಕಾಶವಾದಿ' ಆಗಿದ್ದಾರೆ" ಎಂದು ಅಮಿತ್ ಶಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com