ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಶ್ಚಿಮ ಬಂಗಾಳದ ಕೂಚ್‌ಬೆಹರ್ ಜಿಲ್ಲೆಯ ದಿನ್ಹಾಟಾದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಬೆಂಬಲಿಗರು ತಮ್ಮ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಶನಿವಾರ ಆರೋಪಿಸಿದ್ದಾರೆ.
ಕೇಂದ್ರ ಸಚಿವರ ಕಾರಿನ ಮೇಲೆ ಕಲ್ಲು ತೂರಾಟ
ಕೇಂದ್ರ ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್‌ಬೆಹರ್ ಜಿಲ್ಲೆಯ ದಿನ್ಹಾಟಾದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಬೆಂಬಲಿಗರು ತಮ್ಮ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಶನಿವಾರ ಆರೋಪಿಸಿದ್ದಾರೆ.

ಸಚಿವರಿದ್ದ ಕಾರಿನ ಮೇಲೆ ಟಿಎಂಸಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಕಾರಿನ ಮುಂಭಾಗದ ಗಾಜು ಕೂಡ ಒಡೆದಿದ್ದು, ಸಚಿವರಿಗೂ ಕಪ್ಪು ಬಾವುಟ ತೋರಿಸಲಾಗಿದೆ.

ಪೊಲೀಸರು ಕೇವಲ ಪ್ರೇಕ್ಷಕರಂತೆ ವರ್ತಿಸುತ್ತಿದ್ದಾರೆ ಮತ್ತು ಹಿಂಸಾಚಾರದಲ್ಲಿ ತೊಡಗಿದ ದುಷ್ಕರ್ಮಿಗಳನ್ನು ರಕ್ಷಿಸುತ್ತಿದ್ದಾರೆ. ಟಿಎಂಸಿ ಕಿಡಿಗೇಡಿಗಳಿಗೆ ಆಶ್ರಯ ನೀಡುತ್ತಿದೆ ಎಂದು ಪ್ರಾಮಾಣಿಕ್ ಆರೋಪಿಸಿದ್ದಾರೆ.

"ಕೇಂದ್ರ ಸಚಿವರ ಕಾರಿನ ಮೇಲೆಯೇ ಈ ರೀತಿಯ ದಾಳಿ ನಡೆದರೆ, ರಾಜ್ಯದಲ್ಲಿ ಜನಸಾಮಾನ್ಯರ ಸುರಕ್ಷತೆಯ ಬಗ್ಗೆ ಯೋಚಿಸಬೇಕಾಗಿದೆ" ಎಂದು ಪಶ್ಚಿಮ ಬಂಗಾಳ ಬಿಜೆಪಿ ವಕ್ತಾರ ಶಮಿಕ್ ಭಟ್ಟಾಚಾರ್ಯ ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ನಾಯಕ ಜೈಪ್ರಕಾಶ್ ಮಜುಂದಾರ್ ಅವರು, ದಿಲೀಪ್ ಘೋಷ್ ಮತ್ತು ಸುವೇಂದು ಅಧಿಕಾರಿಯಂತಹ ಬಿಜೆಪಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಶಾಂತಿ ಕದಡಲು ಕೇಸರಿ ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com