ಉದ್ಧವ್ ಠಾಕ್ರೆ, ಶರದ್ ಪವಾರ್ ಮುಸ್ಲಿಮರ ಪರವಾಗಿ ಇಲ್ಲ: ಓವೈಸಿ
ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯವನ್ನು ಬೆಂಬಲಿಸಲಿಲ್ಲ ಮತ್ತು ಅವರು ಮುಸ್ಲಿಮರ ಪರವಾಗಿ ಇಲ್ಲ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ...
Published: 26th February 2023 04:00 PM | Last Updated: 26th February 2023 04:00 PM | A+A A-

ಅಸಾದುದ್ದೀನ್ ಓವೈಸಿ
ಥಾಣೆ: ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯವನ್ನು ಬೆಂಬಲಿಸಲಿಲ್ಲ ಮತ್ತು ಅವರು ಮುಸ್ಲಿಮರ ಪರವಾಗಿ ಇಲ್ಲ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದ್ದುದಿನ್ ಓವೈಸಿ ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ಪ್ರದೇಶದಲ್ಲಿ ತಮ್ಮ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಮುಸ್ಲಿಂ ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡಲು ದೇಶದಲ್ಲಿ ಪ್ರಬಲ ಶಕ್ತಿಯಾಗಬೇಕು ಎಂದು ಕರೆ ನೀಡಿದರು.
"ಅಜಿತ್ ಪವಾರ್, ಸುಪ್ರಿಯಾ ಸುಳೆ, ಶರದ್ ಪವಾರ್, ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವಿಸ್ ಅವರು ನಾಯಕರಾಗಲು ಸಾಧ್ಯವಾದರೆ, ನೀವೇಕೆ ನಾಯಕರಾಗಲು ಸಾಧ್ಯವಿಲ್ಲ?" ಎಂದು ಮುಸ್ಲಿಂ ಸಮುದಾಯದ ಯುವಕರನ್ನು ಪ್ರಶ್ನಿಸಿದರು.
ಇದನ್ನು ಓದಿ: ಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು
ಎಐಎಂಐಎಂ ಅನ್ನು 65 ವರ್ಷಗಳ ಹಿಂದೆ ಕಟ್ಟಲಾಗಿದೆ ಮತ್ತು ಆರಂಭದಲ್ಲಿ ನಮ್ಮ ಪಕ್ಷದ ಸಭೆಗಳಿಗೆ ಬೆರಳೆಣಿಕೆಯಷ್ಟು ಜನ ಹಾಜರಾಗುತ್ತಿದ್ದರು. ಆದರೆ ಆ ಸಂಖ್ಯೆ ಈಗ ಸಾವಿರಕ್ಕೆ ಏರಿದೆ ಎಂದು ಓವೈಸಿ ಹೇಳಿದರು.
ಸಂಸತ್ತು, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ನಾವು ಸಹ ಅಸ್ತಿತ್ವವನ್ನು ಹೊಂದಿದ್ದೇವೆ ಮತ್ತು ಈ ಬೆಳವಣಿಗೆಯು ನಿರಂತರವಾಗಿ ಮುಂದುವರಿಯಬೇಕು. ಯುವಕರು ಚುನಾವಣೆಯ ಮೂಲಕ ಆಡಳಿತಕ್ಕೆ ಬರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.
ಯುವಕರು ರಾಜಕೀಯವಾಗಿ ಮುಂದೆ ಬರಬೇಕು. ಎಐಎಂಐಎಂ ಅನ್ನು ಬಲಿಷ್ಠಗೊಳಿಸಬೇಕು ಮತ್ತು ಮುಸ್ಲಿಮರು ಹಾಗೂ ದಲಿತರ ಹಕ್ಕುಗಳಿಗಾಗಿ ಹೋರಾಡಬೇಕು ಎಂದರು.