ಅಗ್ನಿಪಥ್ ಯೋಜನೆ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ವಜಾ

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗೆ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ, ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿವೆ ಎಂದು ತೋರಿಸಿಕೊಳ್ಳುವ ಮಾರ್ಗವಾಗಿದೆ ಎಂದು ಹೇಳಿದೆ.
ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್

ನವದೆಹಲಿ: ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗೆ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ, ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿವೆ ಎಂದು ತೋರಿಸಿಕೊಳ್ಳುವ ಮಾರ್ಗವಾಗಿದೆ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠವು ಯೋಜನೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ಹೇಳಿದೆ.

ಕಳೆದ ವರ್ಷ ಡಿಸೆಂಬರ್ 15 ರಂದು ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಜೂನ್ 14, 2022 ರಂದು ಕೇಂದ್ರ ಸರ್ಕಾರ ತಂದ ಅಗ್ನಿಪಥ್ ಯೋಜನೆಯು ಸಶಸ್ತ್ರ ಪಡೆಗಳಲ್ಲಿ ಯುವಪಡೆಯ ನೇಮಕಾತಿಗಾಗಿ ನಿಯಮಗಳನ್ನು ರೂಪಿಸುತ್ತದೆ.

ಈ ನಿಯಮಗಳ ಪ್ರಕಾರ, ಹದಿನೇಳೂವರೆಯಿಂದ 21 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಮತ್ತು ಅವರನ್ನು ನಾಲ್ಕು ವರ್ಷಗಳ ಸೇನೆಯ ಅಧಿಕಾರಾವಧಿಗೆ ಸೇರಿಸಲಾಗುತ್ತದೆ.

ಯೋಜನೆಯು ಶೇಕಡಾ 25ರಷ್ಟು ಜನರಿಗೆ 4 ವರ್ಷಗಳ ಸೇವಾವಧಿ ಮುಗಿದ ನಂತರ ಸೇನೆಯಲ್ಲಿ ನಿಯಮಿತ ಸೇವೆಗೆ ಅವಕಾಶ ನೀಡುತ್ತದೆ. ಅಗ್ನಿಪಥ್ ಯೋಜನೆಗೆ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com