ಉಮೇಶ್ ಪಾಲ್‌ ಹತ್ಯೆ ಆರೋಪಿ ಅರ್ಬಾಜ್‌ನನ್ನು ಎನ್‌ಕೌಂಟರ್ ಮಾಡಿದ ಯುಪಿ ಪೊಲೀಸರು!

2005ರಲ್ಲಿ ನಡೆದ ಬಿಎಸ್‌ಪಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಎಂಬಾತನನ್ನು ಕಳೆದ ಫೆಬ್ರವರಿ 24ರಂದು ಹತ್ಯೆಗೈದಿದ್ದ ಆರೋಪಿಗಳಲ್ಲಿ ಒಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಇಂದು ಎನ್‌ಕೌಂಟರ್ ಮಾಡಿದ್ದಾರೆ.
ಉತ್ತರ ಪ್ರದೇಶ ಪೊಲೀಸರು
ಉತ್ತರ ಪ್ರದೇಶ ಪೊಲೀಸರು

2005ರಲ್ಲಿ ನಡೆದ ಬಿಎಸ್‌ಪಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಎಂಬಾತನನ್ನು ಕಳೆದ ಫೆಬ್ರವರಿ 24ರಂದು ಹತ್ಯೆಗೈದಿದ್ದ ಆರೋಪಿಗಳಲ್ಲಿ ಒಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಇಂದು ಎನ್‌ಕೌಂಟರ್ ಮಾಡಿದ್ದಾರೆ.

ಪ್ರತ್ಯಕ್ಷದರ್ಶಿ ಉಮೇಶ್ ಪಾಲ್ ಅವರ ಮೇಲೆ ದಾಳಿ ಮಾಡಲು ದಾಳಿಕೋರರು ಬಳಸಿದ ಬಿಳಿ ಬಣ್ಣದ ಎಸ್‌ಯುವಿ ಕಾರಿನ ಚಾಲಕ ಅರ್ಬಾಜ್‌ನನ್ನು ಗುಪ್ತಚರ ಮಾಹಿತಿಯ ನಂತರ ಪೊಲೀಸ್ ತಂಡಗಳು ಸುತ್ತುವರೆದಿತ್ತು ಎಂದು ಉಪ ಪೊಲೀಸ್ ಆಯುಕ್ತ ನವೇಂದು ಕುಮಾರ್ ತಿಳಿಸಿದ್ದಾರೆ.

ಧೂಮಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನೆಹರೂ ಪಾರ್ಕ್‌ನಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ತನ್ನನ್ನು ಸುತ್ತುವರೆದಿರುವ ಪೊಲೀಸರ ಮೇಲೆ ಅರ್ಬಾಜ್ ಗುಂಡು ಹಾರಿಸಿದ್ದು ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ್ದು ಈ ವೇಳೆ ಅರ್ಬಾಜ್ ಗಾಯಗೊಂಡಿದ್ದನು. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆತ ಸಾವನ್ನಪ್ಪಿದ್ದಾಗಿ ಘೋಷಿಸಿದರು ಎಂದು ನವೇಂದು ಕುಮಾರ್ ತಿಳಿಸಿದ್ದಾರೆ.

ಗುಂಡಿನ ದಾಳಿ ವೇಳೆ ಅರ್ಬಾಜ್ ಜೊತೆಗಿದ್ದ ಮೂರ್ನಾಲ್ಕು ಮಂದಿ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ನಾವು ಅವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದರು.

ವಕೀಲ ಉಮೇಶ್ ಪಾಲ್ ಮತ್ತು ಅವರ ಪೊಲೀಸ್ ಭದ್ರತಾ ಸಿಬ್ಬಂದಿ ಸಂದೀಪ್ ನಿಶಾದ್ ಎಂಬಾತನನ್ನು ಶುಕ್ರವಾರ ಪ್ರಯಾಗ್‌ರಾಜ್‌ನ ಧೂಮಂಗಂಜ್ ಪ್ರದೇಶದಲ್ಲಿನ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ದಾಳಿಯಲ್ಲಿ ಗಾಯಗೊಂಡಿದ್ದ ಇನ್ನೋರ್ವ ಭದ್ರತಾ ಸಿಬ್ಬಂದಿ ರಾಘವೇಂದ್ರ ಸಿಂಗ್ ಅವರನ್ನು ಗಂಭೀರ ಸ್ಥಿತಿಯಲ್ಲಿ ಎಸ್‌ಆರ್‌ಎನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ಭಾನುವಾರ ಲಖನೌಗೆ ರವಾನಿಸಲಾಗಿದೆ.

ಉಮೇಶ್ ಪಾಲ್ ಅವರ ಪತ್ನಿ ಜಯಪಾಲ್ ನೀಡಿದ ದೂರಿನ ಆಧಾರದ ಮೇಲೆ, ಗ್ಯಾಂಗ್ ಸ್ಟರ್ ರಾಜಕಾರಣಿ ಅತೀಕ್ ಅಹ್ಮದ್, ಅವರ ಸಹೋದರ ಅಶ್ರಫ್, ಪತ್ನಿ ಶಾಯಿಸ್ತಾ ಪರ್ವೀನ್, ಇಬ್ಬರು ಪುತ್ರರು, ಸಹಾಯಕರಾದ ಗುಡ್ಡು ಮುಸ್ಲಿಂ ಮತ್ತು ಗುಲಾಮ್ ಸೇರಿದಂತೆ ಇತರ ಒಂಬತ್ತು ಮಂದಿ ವಿರುದ್ಧ ಧೂಮಂಗಂಜ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.  

ಆರೋಪಿಗಳ ವಿರುದ್ಧ ಸೆಕ್ಷನ್ 147(ಗಲಭೆ), 148(ಗಲಭೆ, ಮಾರಣಾಂತಿಕ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತ), 149(ಕಾನೂನುಬಾಹಿರ ಸಭೆ), 302(ಕೊಲೆ), 307(ಕೊಲೆಗೆ ಯತ್ನ), 506(ಅಪರಾಧ ಬೆದರಿಕೆ) ಮತ್ತು 120 ಬಿ(ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ ಮತ್ತು ಸ್ಫೋಟಕ ವಸ್ತುಗಳ ಕಾಯಿದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯ ನಿಬಂಧನೆಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಉಮೇಶ್ ಪಾಲ್ ಹತ್ಯೆಯ ನಂತರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರತಿಪಕ್ಷ ಸಮಾಜವಾದಿ ಪಕ್ಷವು ಪ್ರಶ್ನಿಸಿದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಫಿಯಾಗಳನ್ನು ನಾಶಮಾಡಲು ಶಪಥ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com