ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಖುಷ್ಬೂ ಸುಂದರ್ ನಾಮನಿರ್ದೇಶನ
ತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ನಟಿ ಕಮ್ ರಾಜಕಾರಣಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಖುಷ್ಬು ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸೋಮವಾರ ಹೇಳಿದ್ದಾರೆ.
Published: 27th February 2023 05:17 PM | Last Updated: 27th February 2023 05:18 PM | A+A A-

ಖುಷ್ಬೂ ಸುಂದರ್
ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ನಟಿ ಕಮ್ ರಾಜಕಾರಣಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಖುಷ್ಬು ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸೋಮವಾರ ಹೇಳಿದ್ದಾರೆ.
ಎನ್‌ಸಿಡಬ್ಲ್ಯು ನಿರ್ದೇಶಕರು ಹೊರಡಿಸಿದ ಆದೇಶದಲ್ಲಿ ನಾಮನಿರ್ದೇಶನವು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಇರಲಿದೆ ಎಂದು ಹೇಳಿದೆ.
ಎನ್‌ಸಿಡಬ್ಲ್ಯು ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನಗೊಂಡಿರುವ ಖುಷ್ಬೂ ಅವರನ್ನು ಅಣ್ಣಾಮಲೈ ಅಭಿನಂದಿಸಿದ್ದಾರೆ.
Thank you so much Mam. You have been a great at support https://t.co/lzF7szIgbs
— KhushbuSundar (@khushsundar) February 27, 2023
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಇದು ಅವರ ಪಟ್ಟುಬಿಡದ ಅನ್ವೇಷಣೆ ಮತ್ತು ಮಹಿಳೆಯರ ಹಕ್ಕುಗಳಿಗಾಗಿ ನಿರಂತರ ಹೋರಾಟದ ಫಲ!' ಎಂದಿದ್ದಾರೆ.
ಅಣ್ಣಾಮಲೈ ಯಾವಾಗಲೂ ನನಗೆ ಉತ್ತಮ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಖುಷ್ಬೂ ಪ್ರತಿಕ್ರಿಯಿಸಿದ್ದಾರೆ.
ಪ್ರತಿಸ್ಪರ್ಧಿ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿರುವ ಖುಷ್ಬು ಸುದ್ದಿಯಲ್ಲಿದ್ದಾರೆ.