ಗುಜರಾತ್: ವಲ್ಸಾದ್ ಫಾರ್ಮಾ ಕಂಪನಿಯಲ್ಲಿ ಸ್ಫೋಟ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ
ಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
Published: 28th February 2023 08:15 AM | Last Updated: 28th February 2023 08:16 AM | A+A A-

ಫಾರ್ಮ್ ಕಂಪನಿಯಲ್ಲಿ ಸ್ಫೋಟ
ವಲ್ಸಾದ್: ಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಸಾರಿಗಾಮ್ ಸಿಐಡಿಸಿ ರಾಸಾಯನಿಕ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದಾಗ್ಯೂ, ಯಾವ ರಾಸಾಯನಿಕ ಎಂಬುದು ತಿಳಿಯದೆ ಬೆಂಕಿ ನಂದಿಸಲು ನೀರನ್ನು ಬಳಸಲಿಲ್ಲ.
Gujarat: Explosion in Valsad's pharma company; 2 dead, 2 injured
Read @ANI Story | https://t.co/0Ctl3wWRz4#Gujarat #Explosion #Valsad pic.twitter.com/ErbS3EIbxX— ANI Digital (@ani_digital) February 28, 2023
ಇಲ್ಲಿಯವರೆಗೂ ಎರಡು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ತೆರಳಿದಾಗ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ಯಾವ ರಾಸಾಯನಿಕ ಎಂಬುದು ತಿಳಿಯದೆ ಅಗ್ನಿ ನಿಯಂತ್ರಣ ಕಾರ್ಯಾಚರಣೆಯನ್ನು ಆರಂಭಿಸಲಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ರಾಹುಲ್ ಮುರಾರಿ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಇಂದು ಮತ್ತೆ ಆರಂಭಿಸಲಾಗುತ್ತಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.