ಚೆನ್ನೈ: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲು
ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Published: 28th February 2023 12:42 PM | Last Updated: 28th February 2023 08:18 PM | A+A A-

ಪ್ರಹ್ಲಾದ್ ಮೋದಿ- ನರೇಂದ್ರ ಮೋದಿ
ಚೆನ್ನೈ: ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚಿನ ವಿವರಗಳನ್ನು ನೀಡದೆ, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಯನಂಬಾಕ್ಕಂನ ಆಸ್ಪತ್ರೆಯ ಮೂಲಗಳು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿವೆ.
ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಡೀಲರ್ಸ್ ಫೆಡರೇಶನ್‌ನ ಉಪಾಧ್ಯಕ್ಷರೂ ಆಗಿರುವ ಪ್ರಹ್ಲಾದ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಪ್ರವಾಸದಲ್ಲಿದ್ದು, ಮಧುರೈ ಮೀನಾಕ್ಷಿ ದೇವಸ್ಥಾನ, ರಾಮೇಶ್ವರಂ ದೇವಸ್ಥಾನ ಮತ್ತು ಕನ್ನಿಯಾಕುಮಾರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.