2023ರಲ್ಲಿ ಸರಣಿ ಅಸೆಂಬ್ಲಿ ಚುನಾವಣೆ: ಲೋಕಸಭಾ ಚುನಾವಣೆಯ 'ಸೆಮಿಫೈನಲ್' 

ಈ ವರ್ಷ ನಡೆಯಲಿರುವ ಅನೇಕ ರಾಜ್ಯಗಳ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸೆಮಿ ಫೈನಲ್ ಎಂದೇ ಹೇಳಲಾಗುತ್ತಿದೆ.
ಅಮಿತ್ ಶಾ ಜೊತೆಗೆ ರಾಜ್ಯ ಬಿಜೆಪಿ ನಾಯಕರು
ಅಮಿತ್ ಶಾ ಜೊತೆಗೆ ರಾಜ್ಯ ಬಿಜೆಪಿ ನಾಯಕರು

ನವದೆಹಲಿ: ಈ ವರ್ಷ ನಡೆಯಲಿರುವ ಅನೇಕ ರಾಜ್ಯಗಳ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸೆಮಿ ಫೈನಲ್ ಎಂದೇ ಹೇಳಲಾಗುತ್ತಿದೆ.  ಈಶಾನ್ಯ ರಾಜ್ಯಗಳು ಅಲ್ಲದೇ ಕರ್ನಾಟಕ, ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. 

ಈಶಾನ್ಯ ರಾಜ್ಯಗಳಾದ ನಾಗಲ್ಯಾಂಡ್, ತ್ರಿಪುರಾ, ಮೇಘಾಲಯದಲ್ಲಿ ಫೆಬ್ರವರಿ- ಮಾರ್ಚ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ಮೂರು ರಾಜ್ಯಗಳಲ್ಲಿ ಒಟ್ಟಿಗೆ ಚುನಾವಣೆ ಮುಗಿಸಿದ ನಂತರ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಆಯೋಗ ಉದ್ದೇಶಿಸಿದೆ ಎಂದು  ಮೂಲಗಳಿಂದ ತಿಳಿದುಬಂದಿದೆ. 

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಅಂತ್ಯವಾಗಲಿದೆ. ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. 2023ರ ಕೊನೆಯಲ್ಲಿ ಅಥವಾ 2024ರ ಜನವರಿಯಲ್ಲಿ ಮಿಜೋರಾಂ, ಛತ್ತೀಸ್ ಗಢ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದ ಶಾಸನಸಭೆಗಳ ಆಡಳಿತಾವಧಿ ಮುಕ್ತಾಯವಾಗಲಿದೆ. 

40 ಸದಸ್ಯ ಬಲದ ಮಿಜೋರಾಂ ವಿಧಾನಸಭೆ ಅವಧಿ ಡಿಸೆಂಬರ್ 17ಕ್ಕೆ ಕೊನೆಯಾಗಲಿದ್ದು, ಛತ್ತೀಸ್ ಗಢ ಮತ್ತು ಮಧ್ಯ ಪ್ರದೇಶ ವಿಧಾನಸಭೆಗಳ ಅವಧಿ ಕ್ರಮವಾಗಿ ಜನವರಿ 3, 6, 2024ರಂದು ಅಂತ್ಯವಾಗಲಿದೆ. ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆಗಳ ಅವಧಿ ಕ್ರಮವಾಗಿ ಜನವರಿ 14 ಮತ್ತು 16 ರಂದು ಕೊನೆಯಾಲಿದ್ದು, ಈ ಐದು ರಾಜ್ಯಗಳ ಚುನಾವಣೆ ಒಟ್ಟಿಗೆ ನಡೆಯುವ ಸಾಧ್ಯತೆಯಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com