ಚಂದ್ರಬಾಬು ನಾಯ್ಡು ರ್ಯಾಲಿಯಲ್ಲಿ ಕಾಲ್ತುಳಿತ: 3 ಸಾವು ಹಲವರಿಗೆ ಗಾಯ

ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ಟಿಡಿಪಿ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 
ಗುಂಟೂರಿನಲ್ಲಿ ಕಾಲ್ತುಳಿತ ಉಂಟಾದ ಕಾರ್ಯಕ್ರಮ
ಗುಂಟೂರಿನಲ್ಲಿ ಕಾಲ್ತುಳಿತ ಉಂಟಾದ ಕಾರ್ಯಕ್ರಮ

ಗುಂಟೂರು: ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ಟಿಡಿಪಿ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಈ ರ್ಯಾಲಿಯಲ್ಲಿ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭಾಗವಹಿಸಿದ್ದರು. ಘಟನೆಯಲ್ಲಿ ಹಲವು ಮಂದಿಗೆ ಗಾಯಗಳಾಗಿವೆ. 

ಒಂದು ವಾರದ ಅವಧಿಯಲ್ಲಿ ಟಿಡಿಪಿ ನಾಯಕರ ಸಾರ್ವಜನಿಕ ಸಭೆಯಲ್ಲಿ  ನಡೆದಿರುವ ಎರಡನೇ ಘಟನೆ ಇದಾಗಿದೆ. ಡಿ.28 ರಂದು ನೆಲ್ಲೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 8 ಮಂದಿ ಸಾವನ್ನಪ್ಪಿದ್ದರು.
 
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಮೂವರು ಮಹಿಳೆಯರು ತಮ್ಮ ಜೀವಗಳನ್ನು ಕಳೆದುಕೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಚಂದ್ರಬಾಬು ನಾಯ್ಡು ಈ ಕಾರ್ಯಕ್ರಮದಲ್ಲಿ ಮುಂಬರುವ ಸಂಕ್ರಾಂತಿಗಾಗಿ ಜನತೆಗೆ ಉಡುಗೊರೆ ನೀಡಲು ಯೋಜನೆ ಹೊಂದಿದ್ದರು. ಅದರಂತೆ ಕಾರ್ಯಕ್ರಮ ಮುಕ್ತಾಯಗೊಂಡು ನಾಯ್ಡು ಅವರು ನಿರ್ಗಮಿಸಿದ ಬಳಿಕ ಉಡುಗೊರೆ ವಿತರಣೆ ಇತ್ತು, ಈ ಸಂದರ್ಭದಲ್ಲಿ ಜನತೆ ಉಡುಗೊರೆ ಪಡೆಯಲು ನುಗ್ಗಿದ್ದು, ಕಾಲ್ತುಳಿತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಚಂದ್ರಬಾಬು ನಾಯ್ಡು ಕಾಲ್ತುಳಿತಕ್ಕೊಳಗಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ನೆರವು ಘೋಷಿಸಿದ್ದು, ಮೃತರ ಮಕ್ಕಳಿಗೆ ಎನ್ ಟಿಆರ್ ಟ್ರಸ್ಟ್ ನ ಶೈಕ್ಷಣಿಕ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡುವುದಾಗಿ ಘೋಷಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com