ದೇಶಾದ್ಯಂತ ಹೊಸ ವರ್ಷಾಚರಣೆ: 2023 ನ್ನು ಸಂಭ್ರಮದಿಂದ ಸ್ವಾಗತಿಸಿದ ಜನತೆ

ದೇಶಾದ್ಯಂತ ಹೊಸ ಕ್ಯಾಲೆಂಡರ್ ವರ್ಷವನ್ನು ಜನತೆ ಸ್ವಾಗತಿಸಿದ್ದಾರೆ. 
ಹೊಸ ವರ್ಷಾಚರಣೆ (ಸಾಂಕೇತಿಕ ಚಿತ್ರ)
ಹೊಸ ವರ್ಷಾಚರಣೆ (ಸಾಂಕೇತಿಕ ಚಿತ್ರ)

ಬೆಂಗಳೂರು: ದೇಶಾದ್ಯಂತ ಹೊಸ ಕ್ಯಾಲೆಂಡರ್ ವರ್ಷವನ್ನು ಜನತೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಯೂ ಸಂಭ್ರಮಾಚರಣೆ ಜೋರಾಗಿತ್ತು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಜನತೆ ಅದ್ಧೂರಿ ಆಚರಣೆಯಲ್ಲಿ ತೊಡಗಿದ್ದರು. 

ಸಂಭ್ರಮಾಚರಣೆಯ ವೇಳೆ ಎಲ್ಲಿಯೂ ಅವಘಡಗಳು ಸಂಭವಿಸದಂತೆ ಈ ಬಾರಿ ಪೊಲೀಸ್ ಇಲಾಖೆ ಬಂದೋ ಬಸ್ತ್ ವ್ಯವಸ್ಥೆ ಕೈಗೊಂಡಿತ್ತು. ಅದರ ಫಲವಾಗಿ ಇತ್ತೀಚಿನವರೆಗೂ  ಎಲ್ಲಿಯೂ ಅಹಿತಕರ ಘಟನೆಗಳ ಬಗ್ಗೆ ವರದಿಯಾಗಿಲ್ಲ. ಎಂ ಜಿ ರಸ್ತೆಯಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರನ್ನು ಕಬ್ಬನ್ ಪಾರ್ಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಆ ಭಾಗಗಳಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಸುರಕ್ಷಿತೆಯ ದೃಷ್ಟಿಯಿಂದ ಸಂಚಾರದಲ್ಲಿ ಬದಲಾವಣೆ ಮಾಡಲಾಗಿತ್ತು. 

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ರೆಸ್ಟ್ ಹೌಸ್ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆಗಳಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಮತ್ತು ಅಗತ್ಯ ಸೇವೆಗಳ ವಾಹನಗಳನ್ನು ಹೊರತುಪಡಿಸಿ, ಇತರೆ ವಾಹನಗಳ ಸಂಚಾರಕ್ಕೆ ಈ ರಸ್ತೆಯಲ್ಲಿ ನಿರ್ಬಂಧ ಹೇರಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com