ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಭೀತಿ: 24 ಗಂಟೆಗಳಲ್ಲಿ 173 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 173 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,670ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
Published: 02nd January 2023 11:34 AM | Last Updated: 02nd January 2023 11:34 AM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 173 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,670ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿ (4,46,78,822) ಗೆ ಏರಿಕೆಯಾಗಿದೆ ಮತ್ತು ಈವರೆಗೂ 5,30,707 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿಯಿಂದ ತಿಳಿದುಬಂದಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಸದ್ಯ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ. ದೇಶದಲ್ಲಿ ಇದುವರೆಗೆ 4,41,45,445 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಹೊಸ ವರ್ಷಾಚರಣೆ ಸಂಭ್ರಮದಿಂದ ಆಚರಿಸಿದ ಸಿಲಿಕಾನ್ ಸಿಟಿ ಜನತೆ, ಕೋವಿಡ್ ಆತಂಕ ವ್ಯಕ್ತಪಡಿಸಿದ ವೈದ್ಯರು
ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೂ 220.10 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.