ಛತ್ತೀಸ್‌ಗಢ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಶ್‌ಪುರ: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಹೊಸ ವರ್ಷದ ಮೊದಲ ದಿನವಾದ ಭಾನುವಾರ ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಟ್ಟಾ ಜಲಪಾತದಲ್ಲಿ ಪಿಕ್ನಿಕ್ ಮುಗಿಸಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

"ಮೃತರನ್ನು ಅನಿಲ್ ಸಿಂಗ್, ಅವರ ಸಹೋದರಿ ಜಯಂತಿ, ಅವರ ಮಗ ಮೋಹಿತ್(8) ಮತ್ತು 11 ತಿಂಗಳ ಹೆಣ್ಣು ಮಗು ವೆನಿಶಾ ಎಂದು ಗುರುತಿಸಲಾಗಿದೆ. ಕಾರಿನಲ್ಲಿ 10 ಜನರಿದ್ದರು. ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರ ಮೂವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ" ಎಂದು ಜಶ್ಪುರ್ ಪೊಲೀಸ್ ವರಿಷ್ಠಾಧಿಕಾರಿ ಡಿ ರವಿಶಂಕರ್ ತಿಳಿಸಿದ್ದಾರೆ.

"ಜಲಪಾತ ಮತ್ತು ಅಣೆಕಟ್ಟಿನ ನಡುವಿನ ತೀಕ್ಷ್ಣವಾದ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಆರು ಮಂದಿಯಲ್ಲಿ ಇಬ್ಬರನ್ನು ಚಿಕಿತ್ಸೆಗಾಗಿ ನೆರೆಯ ಜಾರ್ಖಂಡ್‌ನ ರಾಂಚಿಗೆ ಸ್ಥಳಾಂತರಿಸಲಾಗಿದೆ" ಎಂದು ಅವರು ಹೇಳಿದ್ದಾರೆ.

ಈ ಅಪಘಾತಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com