ಉಗ್ರರು ದಾಳಿ ನಡೆಸಿದ್ದ ರಜೌರಿಯಲ್ಲಿ ಸ್ಫೋಟ: ಮಗು ಸಾವು, ಐವರಿಗೆ ಗಂಭೀರ ಗಾಯ
ಭಾನುವಾರ ಉಗ್ರರು ದಾಳಿ ನಡೆಸಿ ನಾಲ್ವರನ್ನು ಬಲಿಪಡೆದುಕೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಮಗುವೊಂದು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
Published: 02nd January 2023 11:31 AM | Last Updated: 02nd January 2023 12:46 PM | A+A A-

ಸ್ಥಳದಲ್ಲಿರುವ ಭದ್ರತಾಪಡೆಗಳು.
ಶ್ರೀನಗರ: ಭಾನುವಾರ ಉಗ್ರರು ದಾಳಿ ನಡೆಸಿ ನಾಲ್ವರನ್ನು ಬಲಿಪಡೆದುಕೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಮಗುವೊಂದು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಉಗ್ರರು ಗುಂಡಿನ ನಡೆಸಿದ್ದ ಮನೆಯಲ್ಲಿಯೇ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಗಾಯಗೊಂಡಿರುವ ಐವರ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸ್ಫೋಟವು ಡ್ಯಾಂಗ್ರಿ ಗ್ರಾಮದಲ್ಲಿ ವರದಿಯಾಗಿದೆ. ನಿನ್ನೆ ಗುಂಡಿನ ದಾಳಿ ನಡೆದ ಮನೆಗಳ ಸಮೀಪವಿದೆ ಎನ್ನಲಾಗುತ್ತಿದೆ. ಸ್ಫೋಟದಲ್ಲಿ ಗಾಯಗೊಂಡ ಎಲ್ಲರನ್ನೂ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ರಜೌರಿ ಉಗ್ರರ ದಾಳಿ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ, ಘಟನೆ ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಬಂದ್'ಗೆ ಕರೆ, ಬಿಜೆಪಿ ಬೆಂಬಲ
ಈ ನಡುವೆ ನಾಗರೀಕರ ಮೇಲೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದ ಉಗ್ರರಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿದೆ ಎಂದು ವರದಿಗಳು ತಿಳಿಸಿವೆ.
ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಶಂಕಿತ ಸುಧಾರಿತ ಸ್ಫೋಟಕ ಸಾಧನವನ್ನು ಪತ್ತೆ ಮಾಡಿದೆ ಎಂದು ತಿಳಿದುಬಂದಿದೆ.
ಭಯೋತ್ಪಾದಕರು ನಿರ್ದಿಷ್ಟ ಸಮುದಾಯದವರ ಮೇಲೆ ದಾಳಿ ನಡೆಸುತ್ತಿದ್ದು, ಅವರ ಪತ್ತೆ ಹಚ್ಚಲು ಹೆಚ್ಚುವರಿ ಸಿಬ್ಬಂದಿಯನ್ನು ಸೇರಿಸಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧ
ಎಡಿಜಿಪಿ ಮುಕೇಶ್ ಸಿಂಗ್ ಅವರು ಮಾತನಾಡಿ, ಭಾನುವಾರ ಮೊದಲು ಗುಂಡಿನ ದಾಳಿ ಆರಂಭವಾದ ಮನೆಯಲ್ಲಿ ಇಂದು ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಗಾಯಗೊಂಡು, ಮಗು ಸಾವನ್ನಪ್ಪಿದೆ. ಓರ್ವ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.
ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಉಗ್ರರು ಭಾನುವಾರ ದಾಳಿ ನಡೆಸಿದ್ದರು. ಘಟನೆಯಲ್ಲಿ ನಾಲ್ವರು ನಾಗರೀಕರು ಸಾವ್ನಪ್ಪಿದ್ದಾರೆ.
ರಜೌರಿಯಲ್ಲಿ ಭುಗಿಲೆದ್ದ ಪ್ರತಿಭಟನೆ
ಈ ನಡುವೆ ಉಗ್ರರ ದಾಳಿ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಲವು ಸಂಘಟನೆಗಳು ರಜೌರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: 2022 ರಲ್ಲಿ ಕಾಶ್ಮೀರದಲ್ಲಿ 186 ಉಗ್ರರ ಹತ್ಯೆ, 159 ಭಯೋತ್ಪಾದಕರ ಬಂಧನ
ರಜೌರಿ ಆಸ್ಪತ್ರೆಯ ಮುಂದೆ ಸೇರಿದ ಹಲವು ಸಂಘಟನೆಗಳ ಸದಸ್ಯರು ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಭದ್ರತಾ ಸಂಸ್ಥೆಗಳ ವಿರುದ್ಧವೂ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಪರಿಹಾರ ಘೋಷಿಸಿದ ಲೆಫ್ಟಿನೆಂಟ್ ಗವರ್ನರ್
ಘಟನೆ ಸಂಬಂಧ ಮೃತರ ಕುಟುಂಬಕ್ಕೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬಕ್ಕೆ ರೂ.10 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರ ಚಿಕಿತ್ಸೆಗಾಗಿ ರೂ.1 ಲಕ್ಷ ಪರಿಹಾರ ನೀಡುವುದಾಗಿ ಮನೋಜ್ ಸಿನ್ಹಾ ಅವರು ಹೇಳಿದ್ದಾರೆ.