ಭಾರತ್ ಜೋಡೋ ಯಾತ್ರೆಗೆ ಆಹ್ವಾನ: ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ ಮಾಯಾವತಿ
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಸೋಮವಾರ ಧನ್ಯವಾದ ಅರ್ಪಿಸಿದ್ದಾರೆ.
Published: 02nd January 2023 06:30 PM | Last Updated: 02nd January 2023 06:30 PM | A+A A-

ಮಾಯಾವತಿ
ಲಖನೌ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಸೋಮವಾರ ಧನ್ಯವಾದ ಅರ್ಪಿಸಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಬಿಎಸ್‌ಪಿ ಮುಖ್ಯಸ್ಥೆ, 'ಭಾರತ್ ಜೋಡೋ ಯಾತ್ರೆಗೆ ಶುಭಾಶಯಗಳು ಮತ್ತು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ನನಗೆ ಪತ್ರ ಬರೆದಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು' ಎಂದು ಹೇಳಿದ್ದಾರೆ.
ಇದನ್ನು ಓದಿ: ಭಾರತ್ ಜೋಡೋ ಯಾತ್ರೆಗೆ ಸಂಜಯ್ ರಾವುತ್ ಮೆಚ್ಚುಗೆ; 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಪ್ರತಿಪಕ್ಷಗಳ ನಾಯಕ?
ಆದರೆ, ಮಾಯಾವತಿ ಅವರು ಯಾತ್ರೆಯಲ್ಲಿ ಭಾಗವಹಿಸುತ್ತಾರೆಯೇ ಅಥವಾ ಇಲ್ಲವೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಪ್ರಸ್ತುತ ಚಳಿಗಾಲದ ವಿರಾಮದಲ್ಲಿದೆ ಮತ್ತು ಜನವರಿ 3 ರಂದು ಪುನರಾರಂಭಗೊಳ್ಳಲಿದೆ.
ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾದ ಯಾತ್ರೆ ಇದುವರೆಗೆ 10 ರಾಜ್ಯಗಳ ಮೂಲಕ 2,800 ಕಿ.ಮೀ.ಗೂ ಹೆಚ್ಚು ಕ್ರಮಿಸಿದ್ದು, ಈ ತಿಂಗಳು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ.