ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪ್ರೀತಿಗೆ ವಿರೋಧ, ಬಾಯ್ ಫ್ರೆಂಡ್ ಜೊತೆ ಸೇರಿ ಹೆತ್ತ ತಾಯಿಗೆ ಚಾಕು ಇರಿದು ಕೊಂದ ಮಗಳು!

ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನು 17 ವರ್ಷದ ಹದಿಹರೆಯದ ಯುವತಿ ಹಾಗೂ ಆಕೆಯ ಪ್ರಿಯಕರ ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಗ್ವಾಲಿಯರ್: ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನು 17 ವರ್ಷದ ಹದಿಹರೆಯದ ಯುವತಿ ಹಾಗೂ ಆಕೆಯ ಪ್ರಿಯಕರ ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಈ ಘಟನೆ ನಡೆದ ನಂತರ ಯುವತಿಯನ್ನು ತದನಂತರ ಆಕೆಯ ಸ್ನೇಹಿತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಎರಡು ತಿಂಗಳ ಹಿಂದೆ ಯುವತಿ ಆತನೊಂದಿಗೆ ಓಡಿಹೋಗಿದ್ದ ನಂತರ ಬಂಧಿಸಲಾಗಿತ್ತು. ನಂತರ ಆತ ಜಾಮೀನು ಪಡೆದುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ಭಾನುವಾರ ಮೃತ ಮಹಿಳೆ ಮನೆ ಬಾಗಿಲು ತೆರೆಯದಿದ್ದಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ, ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿತು ಎಂದು ಪೊಲೀಸ್ ಮಹಾನಿರ್ದೇಶಕ ಅಮಿತ್ ಸಂಘೈ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಆ ಸಂದರ್ಭದಲ್ಲಿ ಯುವತಿ ಮನೆಯಲ್ಲಿ ಇರಲಿಲ್ಲ. ತದನಂತರ ಆಕೆಯ ಹುಡುಕಾಟ ನಡೆಸಿದಾಗ ಬಾಯ್ ಫ್ರೆಂಡ್ ಜೊತೆಗೆ ಇದದ್ದು ಗೊತ್ತಾಯಿತು. ನಂತರ ಅವರನ್ನು ವಿಚಾರಿಸಿದಾಗ, ತರಕಾರಿ ಕತ್ತರಿಸುವ ಚಾಕುವಿನಿಂದ ಇರಿದು ಕೊಂದಿರುವುದಾಗಿ  ಒಪ್ಪಿಕೊಂಡರು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. 

ಪ್ರಿಯಕರೊಂದಿಗೆ ಸಂಬಂಧ ತ್ಯಜಿಸುವಂತೆ ತಾಯಿ ಒತ್ತಾಯಿಸುತ್ತಿದ್ದ ಕಾರಣ ಇಬ್ಬರು ಸೇರಿ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಅಡಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಜಿರಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಂತೋಷ್ ಸಿಂಗ್ ಹೇಳಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com