ಕೇರಳ: ಚರ್ಚ್‌ನಲ್ಲಿ ಊಟ ಸೇವಿಸಿ 100ಕ್ಕೂ ಅಧಿಕ ಮಂದಿ ಅಸ್ವಸ್ಥ, ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವೆ
ಭಾನುವಾರ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಶಂಕಿತ ವಿಷಾಹಾರ ಸೇವನೆ ಘಟನೆಯ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕೀಜ್‌ವೈಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
Published: 02nd January 2023 10:42 AM | Last Updated: 02nd January 2023 10:42 AM | A+A A-

ಪ್ರಾತಿನಿಧಿಕ ಚಿತ್ರ
ತಿರುವಲ್ಲ: ಭಾನುವಾರ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಶಂಕಿತ ವಿಷಾಹಾರ ಸೇವನೆ ಘಟನೆಯ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕೀಜ್‌ವೈಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಅಸ್ವಸ್ಥರನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳದ ಆರೋಗ್ಯ ಸಚಿವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ತನಿಖೆ ನಡೆಸಿ ವಿವರವಾದ ವರದಿಯನ್ನು ಸಲ್ಲಿಸಲು ಆಹಾರ ಸುರಕ್ಷತಾ ಆಯುಕ್ತರಿಗೆ ಸೂಚಿಸಲಾಗಿದೆ.
ಡಿಸೆಂಬರ್ 29 (ಗುರುವಾರ) ರಂದು ಶುದ್ಧೀಕರಣ/ದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರು ಕಾರ್ಯಕ್ರಮದಲ್ಲಿ ಆಹಾರವನ್ನು ಸೇವಿಸಿದಾಗ ಈ ಘಟನೆ ಸಂಭವಿಸಿದೆ. ಮನೆಗೆ ಹಿಂದಿರುಗಿದ ನಂತರ, ಅವರು ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭಿಸಿದರು ಮತ್ತು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಯಿತು.
ಇದನ್ನೂ ಓದಿ: ಮಕ್ಕಳ ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಮೂರು ಸಾವು: 11 ಮಂದಿ ಆಸ್ಪತ್ರೆಗೆ ದಾಖಲು
ಸಮಾರಂಭದಲ್ಲಿ ಆಹಾರ ಸರಬರಾಜು ಮಾಡಿದ ಕೇಟರಿಂಗ್ ಸರ್ವೀಸ್ ಏಜೆನ್ಸಿ ವಿರುದ್ಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ಸ್ಥಳದ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ.
ಅಡುಗೆ ಏಜೆನ್ಸಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 268, 272 ಮತ್ತು 269 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.