ರಜೌರಿ ಉಗ್ರರ ದಾಳಿ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ, ಘಟನೆ ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಬಂದ್'ಗೆ ಕರೆ, ಬಿಜೆಪಿ ಬೆಂಬಲ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾನುವಾರ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾನುವಾರ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ.

ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಉಗ್ರರು ಭಾನುವಾರ ದಾಳಿ ನಡೆಸಿದ್ದರು. ಈ ವೇಳೆ ಮೂವರು ಸಾವ್ನಪ್ಪಿದ್ದರು.

ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದರು. ಇದೀಗ ಗಾಯಾಳುಗಳ ಪೈಕಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆಂದು ವರದಿಗಳಿಂದ ತಿಳಿದುಬಂದಿದೆ.

ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದರು. ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದರು. ಸ್ಥಳದಲ್ಲಿ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಸೇನಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿವೆ. ಶೀಘ್ರದಲ್ಲೇ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲು ಯತ್ನಗಳು ಮುಂದುವರೆದಿವೆ.

ಘಟನೆಯಲ್ಲಿ ಗಾಯಗೊಂಡ ಇತರ 9 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಅವರಲ್ಲಿ ಕೆಲವರ ಸ್ಥಿತಿ “ತುಂಬಾ ಗಂಭೀರವಾಗಿದೆ” ಎಂದು ರಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಬಂದ್'ಗೆ ಕರೆ, ಬಿಜೆಪಿ ಬೆಂಬಲ
ಈ ನಡುವೆ ಘಟನೆ ಖಂಡಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಂದ್'ಗೆ ಕರೆ ನೀಡಲಾಗಿದ್ದು, ಈ ಕರೆಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದೆ.

ರಜೌರಿ ಆಸ್ಪತ್ರೆಯ ಮುಂದೆ ಸೇರಿದ ಹಲವು ಸಂಘಟನೆಗಳ ಸದಸ್ಯರು ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಭದ್ರತಾ ಸಂಸ್ಥೆಗಳ ವಿರುದ್ಧವೂ ಘೋಷಣೆಗಳನ್ನು ಕೂಗಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com