ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ಎನ್ ಐಎ ತನಿಖೆಗೆ ಬಿಜೆಪಿ ಒತ್ತಾಯ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಹೌರಾ- ಜಲ್ಪೈಗುರಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲೂ ತೂರಾಟ ನಡೆಸಲಾಗಿದ್ದು, ಈ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ವಂದೇ ಭಾರತ್ ರೈಲು ಸಾಂದರ್ಭಿಕ ಚಿತ್ರ
ವಂದೇ ಭಾರತ್ ರೈಲು ಸಾಂದರ್ಭಿಕ ಚಿತ್ರ

ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಹೌರಾ- ಜಲ್ಪೈಗುರಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲೂ ತೂರಾಟ ನಡೆಸಲಾಗಿದ್ದು, ಈ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಮಾಲ್ಡಾದಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿರುವ ಕುಮರ್ ಗಂಜ್ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಯಾರೂ ಕೂಡಾ ಗಾಯಗೊಂಡಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ವಂದೇ ಭಾರತ್ ಎಕ್ಸ್ ಪ್ರೆಸ್ 22303 ರೈಲಿನ ಸಿ-13 ನಂಬರಿನ ಬೋಗಿಯ ಗಾಜುಗಳು ಹಾನಿಯಾಗಿವೆ. ಸೋಮವಾರ ಸಂಜೆ 5-10 ರ ವೇಳೆ ಈ ಘಟನೆ ನಡೆದ ನಂತರ ಮಾರ್ಗ ಮಧ್ಯದಲ್ಲಿ ರೈಲನ್ನು ನಿಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

 ಈ ಘಟನೆ ಬಗ್ಗೆ ರೈಲ್ವೆ ಸುರಕ್ಷತಾ ಪಡೆಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಮಾಲ್ಡಾ ಟೌನ್ ಸರ್ಕಾರಿ ರೈಲ್ವೆ ಪೊಲೀಸ್ ಐಸಿ ಪ್ರಶಾಂತ್ ರೈ ತಿಳಿಸಿದ್ದಾರೆ. ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಿದ್ದರು.

ಉದ್ಘಾಟನಾ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಇದೀಗ ಕಲ್ಲು ತೂರಾಟ ನಡೆಸುವ ಮೂಲಕ ಸೇಡು ತೀರಿಸಿಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳ ವಿಪಕ್ಷ ನಾಯಕ ಸುವೇದು ಅಧಿಕಾರಿ ಆರೋಪಿಸಿದ್ದು, ಈ ಘಟನೆ ಬಗ್ಗೆ ರಾಷ್ಟ್ರೀಯ ತನಿಖೆಯಿಂದ ತನಿಖೆ ನಡೆಸಬೇಕೆಂದು ಪ್ರಧಾನಿ ಕಾರ್ಯಾಲಯ ಹಾಗೂ  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com