ತಮಿಳುನಾಡು: ಕಡಲೂರಿನಲ್ಲಿ ಮುಂಜಾನೆ ಸರಣಿ ಅಪಘಾತ; ಒಂದೇ ಕುಟುಂಬದ ಐವರು ಸಾವು
ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಆರು ವಾಹನಗಳ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 03rd January 2023 10:51 AM | Last Updated: 03rd January 2023 06:58 PM | A+A A-

ತಮಿಳುನಾಡಿನ ಕುಡಲೂರಿನ ಬಳಿ ಸಂಭವಿಸಿದ ಸರಣಿ ಅಪಘಾತ
ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಆರು ವಾಹನಗಳ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸ್ ತಂಡ, ಮೃತರ ಗುರುತು ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ವಾಹನದ ಆರ್‌ಸಿ ಪರಿಶೀಲನೆ ವೇಳೆ ಕಾರು ಚೆನ್ನೈನಲ್ಲಿ ನೋಂದಣಿ ಮಾಡಿರುವುದು ಬೆಳಕಿಗೆ ಬಂದಿದೆ.
ಎರಡು ಬಸ್‌ಗಳು, ಎರಡು ಟ್ರಕ್‌ಗಳು ಮತ್ತು ಎರಡು ಕಾರುಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಮೃತಪಟ್ಟಿರುವ ಐವರೂ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಡಲೂರಿನ ವೇಪ್ಪೂರಿನ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಇದನ್ನೂ ಓದಿ: ಹಾಸನ: ಸರಣಿ ಅಪಘಾತ, ನಾಲ್ವರು ಮಕ್ಕಳು ಸೇರಿದಂತೆ 9 ಜನರ ದುರ್ಮರಣ
ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಡಲೂರು ಆಸ್ಪತ್ರೆಯಲ್ಲಿರಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.