ಪಾಲ್ಘರ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರದ ಆರೋಪ, ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 24 ವರ್ಷದ ಬುಡಕಟ್ಟು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Published: 03rd January 2023 10:45 AM | Last Updated: 03rd January 2023 10:45 AM | A+A A-

ಸಾಂದರ್ಭಿಕ ಚಿತ್ರ
ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 24 ವರ್ಷದ ಬುಡಕಟ್ಟು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
16 ವರ್ಷದ ಬಾಲಕಿ ಭಾನುವಾರ ಸಂಜೆ ನೇಚರ್ ಕಾಲ್‌ಗೆಂದು ನೆಹಲ್ಪಾಡಾದಲ್ಲಿರುವ ತನ್ನ ಮನೆಯಿಂದ ಹೊರಗೆ ಹೋದಾಗ ಈ ಘಟನೆ ನಡೆದಿದೆ ಎಂದು ವಾಡಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಈ ವೇಳೆ ಆರೋಪಿಗಳು ಆಕೆಯನ್ನು ಸಮೀಪದ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಭೂತ ಬಿಡಿಸುವ ನೆಪದಲ್ಲಿ 14ರ ಬಾಲಕಿಯ ಮೇಲೆ ಅತ್ಯಾಚಾರ, ಮಂತ್ರವಾದಿ ಬಂಧನ
ಸೋಮವಾರ ಸಂತ್ರಸ್ತೆ ನೀಡಿದ ಪೊಲೀಸ್ ದೂರಿನ ನಂತರ, ಆರೋಪಿಯನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.