ಅರುಣಾಚಲ ಪ್ರದೇಶದಿಂದ ನೆರೆಯ ರಾಷ್ಟ್ರ ಚೀನಾಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆಯ ಸಂದೇಶ

ಗಡಿಯುದ್ದಕ್ಕೂ ದೇಶದ ಭೂ ಪ್ರದೇಶವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪ್ರತಿಪಾದಿಸುವ ಮೂಲಕ ನೆರೆಯ ರಾಷ್ಟ್ರ ಚೀನಾಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. 
ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೊಲೆಂಗ್: ಗಡಿಯುದ್ದಕ್ಕೂ ದೇಶದ ಭೂ ಪ್ರದೇಶವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪ್ರತಿಪಾದಿಸುವ ಮೂಲಕ ನೆರೆಯ ರಾಷ್ಟ್ರ ಚೀನಾಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. 

ಬೊಲೆಂಗ್ ನಲ್ಲಿ ಸೇತುವೆ ಉದ್ಘಾಟಿಸಿ ಮಾತನಾಡಿದ ಸಿಂಗ್, ಭಾರತ ಎಂದಿಗೂ ಯುದ್ಧವನ್ನು ಪ್ರೋತ್ಸಾಹಿಸುವುದಿಲ್ಲ, ನೆರೆಯ ರಾಷ್ಟ್ರಗಳೊಂದಿಗೆ ಯಾವಾಗಲೂ ಸೌಹಾರ್ದಯುತ ಸಂಬಂಧವನ್ನು ಬಯಸುತ್ತದೆ. ಆದಾಗ್ಯೂ, ಗಡಿಯಲ್ಲಿ ಎದುರಾಗುವ ಯಾವುದೇ ಸವಾಲನ್ನು ಎದುರಿಸುವ ಸಾಮರ್ಥ್ಯವನ್ನು ಭಾರತದ ಸೇನೆ ಹೊಂದಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಿದೆ ಎಂದರು. 

ಭಾರತ ನೆರೆಹೊರೆಯವರೊಂದಿಗೆ ಶಾಂತಿಯನ್ನು ಬಯಸುತ್ತದೆ. ಇದು  ಶ್ರೀರಾಮ ಮತ್ತು ಭಗವಾನ್ ಬುದ್ಧನಿಂದ ಬಂದ ನಮ್ಮ ತತ್ವವಾಗಿದೆ. ಒಂದು ವೇಳೆ ಪ್ರಚೋದಿಸಿದರೆ ಯಾವುದೇ ರೀತಿಯ ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com