ಪಾಕಿಸ್ತಾನ ಉಗ್ರರ ಕೇಂದ್ರ: ವಿದೇಶಾಂಗ ಸಚಿವ ಜೈಶಂಕರ್ ವಾಗ್ದಾಳಿ

ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನ ಉಗ್ರರ ಕೇಂದ್ರ ಎಂದು ಕಿಡಿಕಾರಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್
ವಿದೇಶಾಂಗ ಸಚಿವ ಎಸ್ ಜೈಶಂಕರ್

ನವದೆಹಲಿ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನ ಉಗ್ರರ ಕೇಂದ್ರ ಎಂದು ಕಿಡಿಕಾರಿದ್ದಾರೆ.

ವಿಯೆನ್ನಾದಲ್ಲಿ ಮಾತನಾಡಿದ ಅವರು, ಕೆಲವು ವರ್ಷಗಳ ಹಿಂದೆ ಭಾರತದ ಸಂಸತ್ತಿನ ಮೇಲೆ ದಾಳಿ ಮಾಡಿದ ದೇಶ ಇದು, ಮುಂಬೈ ನಗರದ ಮೇಲೆ ದಾಳಿ ನಡೆಸಿತು. ಹೋಟೆಲ್‌ಗಳಿಗೆ ಆಗಮಿಸಿದ್ದ ವಿದೇಶಿ ಪ್ರವಾಸಿಗರ ಮೇಲೆ ದಾಳಿ ಮಾಡಿತ್ತು, ಪ್ರತಿದಿನ ಗಡಿಯಾಚೆಗೆ ಭಯೋತ್ಪಾದಕರನ್ನು ಕಳುಹಿಸುತ್ತಿರುವ ದೇಶವಿದು" ಎಂದು ಜೈಶಂಕರ್ ಪಾಕಿಸ್ತಾನವನ್ನು ಉಲ್ಲೇಖಿಸಿ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಹಿಂದೂ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ ಕ್ರಮವನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈ ಶಂಕರ್ ತೀವ್ರವಾಗಿ ಖಂಡಿಸಿದ್ದು, ಪಾಕಿಸ್ತಾನ ‘ಭಯೋತ್ಪಾದಕರ ಕೇಂದ್ರ’ ಎಂದು ವಾಗ್ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಗಳಲ್ಲಿ ಆರು ನಾಗರಿಕರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಉಗ್ರರ ಮೂಲಕ ಈ ರೀತಿ ಕೃತ್ಯ ನಡೆಸುವ ಪಾಕಿಸ್ತಾನದ ಕ್ರಮ ಹೇಡಿತನದ್ದು ಎಂದು ವಾಗ್ದಾಳಿ ನಡೆಸಿದ್ದಾರೆ.

ತಮ್ಮ ವಾಗ್ದಾಳಿಯಲ್ಲಿ ಪಾಕಿಸ್ತಾನವನ್ನು ಹೆಸರಿಸದೆ ಭಾರತಕ್ಕೆ ಭಯೋತ್ಪಾದಕರನ್ನು ದಾಳಿಗೆ ಬಿಡುವ ಪಾಕಿಸ್ತಾನಕ್ಕೆ ನಾಚಿಕೆ ಆಗಬೇಕು ಎಂದ ಅವರು, ಗಡಿಯಾಚೆ ಭಯೋತ್ಪಾದನಾ ದಾಳಿ ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬದಲಾಗಿ ತನ್ನ ಕೆಲಸವನ್ನು ಮುಂದುವರಿಸಿಕೊಂಡು ಭಾರತದ ಮೇಲೆ ಭಯೋತ್ಪಾದಕರ ಮೇಲೆ ನಕಲಿಯುದ್ದ ಘೋಷಿಸಿದೆ ಎಂದು ದೂರಿದ್ದಾರೆ. 

ಭಾರತದ ಮೇಲೆ ದಾಳಿ ಮಾಡಿದಾಗಲೆಲ್ಲ ಪಾಕಿಸ್ತಾನ ತಕ್ಕ ಉತ್ತರ ಪಡೆದಿದೆ. ಭಯೋತ್ಪಾದಕರನ್ನು ಮುಂದಿಟ್ಟುಕೊಂಡು ಅಮಾಯಕ ನಾಗರಿಕರನ್ನು ಹತ್ಯೆ ಮಾಡುವ ಕೃತ್ಯವನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಪಾಕಿಸ್ತಾನ ಗಂಭೀರ ಪರಿಣಾಮ ಎದುರಿಸಬೇಕಾಗುತ್ತಿದೆ. ಹೀಗಾಗಿ ಎಚ್ಚೆತ್ತುಕೊಳ್ಳಬೇಕಾಗಿದೆ. ಭಯೋತ್ಪಾದಕರು ಮೇಲಿಂದ ಮೇಲೆ ಭಾರತ ಮೇಲೇ ದಾಳಿ ಮಾಡುತ್ತಿರುವುದನ್ನು ನೋಡಿಕೊಂಡು ಸುಮ್ಮನೆ ಇರುವುದಿಲ್ಲ. ಇದಕ್ಕಾಗಿ ಭಯೋತ್ಪಾದಕರು ಮತ್ತು ಪಾಕಿಸ್ತಾನ ತಕ್ಕ ಪ್ರತ್ಯುತ್ತರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com