ಭಾರತ್ ಜೋಡೋ ಯಾತ್ರೆ ಕೈಗೊಂಡಿರುವುದಕ್ಕಾಗಿ ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ
ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ.
Published: 04th January 2023 10:12 AM | Last Updated: 04th January 2023 10:12 AM | A+A A-

ರಾಹುಲ್ ಗಾಂಧಿ
ಅಯೋಧ್ಯ: ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ.
ರಾಮಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಯಾತ್ರೆಗೆ ರಾಹುಲ್ ಗಾಂಧಿಯನ್ನು 'ಆಶೀರ್ವದಿಸಿದ' ಒಂದು ದಿನದ ನಂತರ ಮಂಗಳವಾರ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಇದೀಗ ಈ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಕಾಲ್ನಡಿಗೆಯಲ್ಲಿ ಸಾಗುತ್ತಿರುವ ಯುವಕನಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ರೈ, ಅವರ ನಡೆಯನ್ನು ಮೆಚ್ಚುತ್ತೇನೆ. ಅದರಲ್ಲಿ ತಪ್ಪೇನೂ ಇಲ್ಲ ಎಂದರು.
ಮಂಗಳವಾರ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಯಾತ್ರೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಆರ್‌ಎಸ್‌ಎಸ್ ಭಾರತ್ ಜೋಡೋ ಯಾತ್ರೆಯನ್ನು ಎಂದಿಗೂ ಖಂಡಿಸಿಲ್ಲ' ಎಂದು ಹೇಳಿದರು.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ರಾಹುಲ್ ಗಾಂಧಿಗೆ ಪತ್ರ!
'ಅವರು ಈ ಕಠಿಣ ವಾತಾವರಣದಲ್ಲಿ ನಡೆಯುತ್ತಿದ್ದಾರೆ ಮತ್ತು ಇದನ್ನು ಪ್ರಶಂಸಿಸಲೇಬೇಕು. ಪ್ರತಿಯೊಬ್ಬರೂ ದೇಶದ ಯಾತ್ರೆ ಮಾಡಬೇಕು ಎಂದು ನಾನು ಹೇಳುತ್ತೇನೆ' ಎಂದು ಹೇಳಿದರು.
ರಾಮಮಂದಿರ ಟ್ರಸ್ಟ್‌ನ ಇನ್ನೊಬ್ಬ ಹಿರಿಯ ಟ್ರಸ್ಟಿ ಗೋವಿಂದ್ ದೇವ್ ಗಿರಿ ಕೂಡ ಭಾರತ್ ಜೋಡೋ ಯಾತ್ರೆಯನ್ನು ಶ್ಲಾಘಿಸಿದರು.
'ರಾಷ್ಟ್ರವು ಒಗ್ಗಟ್ಟಾಗಿ, ಸದೃಢವಾಗಿ ಮತ್ತು ಸೌಹಾರ್ದಯುತವಾಗಿ ಉಳಿಯುವಂತೆ ಆಶೀರ್ವದಿಸಬೇಕೆಂದು ಶ್ರೀರಾಮನನ್ನು ನಾನು ಪ್ರಾರ್ಥಿಸುತ್ತೇನೆ. ಭಾರತ್ ಜೋಡೋ ಯಾತ್ರೆಯು ಉತ್ತಮ ಘೋಷಣೆಯಾಗಿದ್ದು, ಭಾರತ ಒಂದಾಗಬೇಕು' ಎಂದರು.