ಭಾರತ್ ಜೋಡೋ ಯಾತ್ರೆಗೆ ಹೋಗಲ್ಲ ನಿತೀಶ್ ಕುಮಾರ್; ಇನ್ನಷ್ಟೇ ನಿರ್ಧರಿಸಬೇಕು- ಆರ್ ಜೆಡಿ
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯನ್ನು ಪಕ್ಷದ ಆಂತರಿಕ ವಿಷಯ ಎಂದು ಹೇಳಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ಪಾದಯಾತ್ರೆಯಲ್ಲಿ ಜೆಡಿಯು ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
Published: 04th January 2023 01:15 AM | Last Updated: 04th January 2023 02:04 PM | A+A A-

ನಿತೀಶ್ ಕುಮಾರ್
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯನ್ನು ಪಕ್ಷದ ಆಂತರಿಕ ವಿಷಯ ಎಂದು ಹೇಳಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ಪಾದಯಾತ್ರೆಯಲ್ಲಿ ಜೆಡಿಯು ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಬಿಹಾರದಲ್ಲಿ ಸಮ್ಮಿಶ್ರ ಸರ್ಕಾರ, ಮಹಾಘಟಬಂಧನ್ ನ ಭಾಗವಾಗಿರುವ ಆರ್ ಜೆಡಿ, ಸಹ ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸುವ ಬಗ್ಗೆ ಸ್ಪಷ್ಟತೆ ನೀಡದೇ ಅಡ್ಡಗೋಡೇ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದು, ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದೆ.
ಉತ್ತರ ಪ್ರದೇಶದಲ್ಲಿ ಜೆಡಿಯು ನಾಯಕರು ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ಜೊತೆ ಹೋಗುವುದಾಗಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ನಿತೀಶ್ ಕುಮಾರ್ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಕೈಗೊಂಡಿರುವುದಕ್ಕಾಗಿ ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ
ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ನ ಆಂತರಿಕ ವಿಷಯವಾಗಿದೆ. ಅವರು ಅವರ ಕಾರ್ಯಕ್ರಮವನ್ನು ಪೂರ್ಣಗೊಳಿಸಲಿ, ನಂತರ ನಾವು ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಕುಳಿತು ಮಾತನಾಡುತ್ತೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಇನ್ನು ಆರ್ ಜೆಡಿ ವಕ್ತಾರ ಮೃತ್ಯುಂಜಯ ತಿವಾರಿ ಮಾತನಾಡಿ, ತಮ್ಮ ಪಕ್ಷದ ಸಿದ್ಧಾಂತವೂ ಕಾಂಗ್ರೆಸ್ ನ ಸಿದ್ಧಾಂತದ ರೀತಿಯದ್ದೇ ಆಗಿದೆ ಎಂದು ಹೇಳಿದ್ದಾರೆ. ಆದರೆ ಆರ್ ಜೆಡಿ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಭಾಗವಹಿಸುವುದರ ಬಗ್ಗೆ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.