ಮತ್ತೊಂದು ಪ್ರಕರಣ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಬ್ಲ್ಯಾಂಕೆಟ್ ಮೇಲೆ ಮೂತ್ರ ವಿಸರ್ಜನೆ

ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ದುರ್ವರ್ತನೆ ತೋರಿದ ಮತ್ತೂಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 6 ರಂದು ಪ್ಯಾರಿಸ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ...
ಏರ್ ಇಂಡಿಯಾ
ಏರ್ ಇಂಡಿಯಾ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ದುರ್ವರ್ತನೆ ತೋರಿದ ಮತ್ತೂಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 6 ರಂದು ಪ್ಯಾರಿಸ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಹೊದಿಕೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಎನ್ನಲಾಗಿದೆ.

ವಿಮಾನದ ಪೈಲಟ್ ಇಂದಿರಾಗಾಂಧಿ ಅಂತರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ಗೆ ಈ ವಿಷಯವನ್ನು ವರದಿ ಮಾಡಿದ್ದರು. ಆದರೆ ಪುರುಷ ಪ್ರಯಾಣಿಕ ತಪ್ಪು ಒಪ್ಪಿಕೊಂಡು ಲಿಖಿತವಾಗಿ ಕ್ಷಮೆಯಾಚಿಸಿದ್ದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಪುರುಷ ಪ್ರಯಾಣಿಕರು ಮದ್ಯದ ಅಮಲಿನಲ್ಲಿದ್ದರು ಮತ್ತು ಅವರು ಕ್ಯಾಬಿನ್ ಸಿಬ್ಬಂದಿಯ ಸೂಚನೆಗಳನ್ನು ಅನುಸರಿಸುತ್ತಿಲ್ಲ. ಅವರು ವಿಮಾನದಲ್ಲಿದ್ದ ಮಹಿಳಾ ಪ್ರಯಾಣಿಕರ ಹೊದಿಕೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ವಿಮಾನ ನಿಲ್ದಾಣದ ನಿಯಂತ್ರಣ ಅಧಿಕಾರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಮಾನವು ದೆಹಲಿಯಲ್ಲಿ ಬೆಳಗ್ಗೆ 9:40ಕ್ಕೆ ಲ್ಯಾಂಡ್ ಆದ ತಕ್ಷಣ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದರು. ಆದರೆ ಮಹಿಳೆ ಮತ್ತು ಬಂಧಿತ ವ್ಯಕ್ತಿಯೊಂದಿಗೆ "ಪರಸ್ಪರ ರಾಜಿ"ಯ ನಂತರ ಲಿಖಿತ ಕ್ಷಮೆಯಾಚನೆಯ ನಂತರ ಅವರನ್ನು ಬಿಟ್ಟು ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರಂಭದಲ್ಲಿ ಲಿಖಿತ ದೂರು ನೀಡಿದ ಮಹಿಳೆ ನಂತರ ಪೊಲೀಸ್ ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಷ ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಮಹಿಳಾ ಸಹ-ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನಿಗೆ ಏರ್ ಇಂಡಿಯಾ ಬುಧವಾರ 30 ದಿನಗಳ ಹಾರಾಟ ನಿಷೇಧವನ್ನು ವಿಧಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com