ಭಯೋತ್ಪಾದಕ ದಾಳಿ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ 1800 ಅರೆಸೇನಾಪಡೆ ಸಿಬ್ಬಂದಿಗಳ ನಿಯೋಜನೆ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ 1,800 ಮಂದಿ ಅರೆಸೇನಾ ಪಡೆ ಯೋಧರನ್ನು ನಿಯೋಜಿಸಲು ನಿರ್ಧರಿಸಿದೆ.
Published: 05th January 2023 02:56 AM | Last Updated: 05th January 2023 03:00 AM | A+A A-

ಅರೆಸೇನಾಪಡೆ ಯೋಧರು
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ 1,800 ಮಂದಿ ಅರೆಸೇನಾ ಪಡೆ ಯೋಧರನ್ನು ನಿಯೋಜಿಸಲು ನಿರ್ಧರಿಸಿದೆ.
ರಜೌರಿಯಲ್ಲಿ ಕಳೆದ ಒಂದೆರಡು ದಿನಗಳಿಂದ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಿಂದೂ ಕುಟುಂಬಗಳನ್ನು ಟಾರ್ಗೆಟ್ ಮಾಡಿ ಹಲವರನ್ನು ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 1,800 ಮಂದಿ ಸಿಆರ್ ಪಿಎಫ್ ಯೋಧರನ್ನು ರಜೌರಿಯಲ್ಲಿ ನಿಯೋಜಿಸಲು ನಿರ್ಧರಿಸಿದೆ.
ಇದನ್ನೂ ಓದಿ: ಕುಪ್ವಾರ: ಎಲ್ಎಸಿ ಬಳಿ ಸೇನೆ ವಶಕ್ಕೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ
ಹಿಂದೂಗಳ ಹತ್ಯೆಯನ್ನು ಖಂಡಿಸಿ ಜಿಲ್ಲಾಡಳಿತ ಜನರ ಸುರಕ್ಷತೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂಬ ಅಸಮಾಧಾನದೊಂದಿಗೆ ರಜೌರಿಯಲ್ಲಿ ಬೃಹತ್ ಪ್ರತಿಭಟನೆಯೂ ನಡೆದಿದೆ.
3 ದಿನಗಳಿಂದ ನೂರಾರು ಭದ್ರತಾ ಸಿಬ್ಬಂದಿಗಳು ರಜೌರಿಯಲ್ಲಿ ಹಿಂದೂ ಕುಟುಂಬಗಳ ಹತ್ಯೆಗೆ ಕಾರಣರಾದವರನ್ನು ಹುಡುಕುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸೋಮವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿ 6 ಮಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು.
ಮತ್ತೆ ಮರು ದಿನ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದರೆ, ಕನಿಷ್ಠ 5 ಮಂದಿಗೆ ಗಾಯಗಳಾಗಿತ್ತು. ಕಳೆದ 2 ವಾರಗಳಲ್ಲಿ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ನಡೆಯುತ್ತಿರುವ 2 ಹಾಗೂ 3 ನೇ ಘಟನೆಗಳು ಇದಾಗಿದ್ದು, ಡಿ.16 ರಂದೂ ಸಹ ಸೇನಾ ಕ್ಯಾಂಪ್ ನ ಹೊರ ಭಾಗದಲ್ಲಿ ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಲಾಗಿತ್ತು.