ತಮಿಳುನಾಡು: ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ 19 ವರ್ಷದ ಯುವತಿಗೆ ಬೆಂಕಿ ಹಚ್ಚಿದ ವ್ಯಕ್ತಿ

ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಕೋಪಗೊಂಡ 21 ವರ್ಷದ ಯುವಕ 19 ವರ್ಷದ ಯುವತಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಗುರುವಾರ ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಯಮತ್ತೂರು: ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಕೋಪಗೊಂಡ 21 ವರ್ಷದ ಯುವಕ 19 ವರ್ಷದ ಯುವತಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಗುರುವಾರ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಯುವತಿ ಇಂದು ಸಾವಿಗೀಡಾಗಿದ್ದಾಳೆ. ಇವರಿಬ್ಬರು ತಿರುಪುರ್ ಜಿಲ್ಲೆಯ ಪಲ್ಲಡಂ ನಿವಾಸಿಗಳಾಗಿದ್ದರು ಎನ್ನಲಾಗಿದೆ.

ನೆರೆಹೊರೆಯಲ್ಲೇ ವಾಸಿಸುತ್ತಿದ್ದ ಇಬ್ಬರು, ಪರಸ್ಪರ ಪ್ರೀತಿಸುತ್ತಿದ್ದರು. ಈಮಧ್ಯೆ, ಯುವತಿಯು ತನ್ನನ್ನು ಮದುವೆಯಾಗುವಂತೆ ಯುವಕನಿಗೆ ಒತ್ತಡ ಹೇರಲು ಪ್ರಾರಂಭಿಸಿದ್ದಳು. ಇದರಿಂದ ಕೋಪಗೊಂಡ ಯುವಕ ಇದರಿಂದ ತಪ್ಪಿಸಿಕೊಳ್ಳಲು ತೀರ್ಮಾನಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ಬುಧವಾರ, ಇಬ್ಬರೂ ನಿರ್ಜನ ಸ್ಥಳದಲ್ಲಿ ಭೇಟಿಯಾಗಿದ್ದಾರೆ ಮತ್ತು ಆಕೆ ಆಗಲೂ ಅವನನ್ನು ಮದುವೆಯಾಗುವಂತೆ ಪೀಡಿಸಲು ಪ್ರಾರಂಭಿಸಿದ್ದಾಳೆ. ಇದರಿಂದ ಕಿರಿಕಿರಿಗೊಂಡ ಯುವ ಆಕೆಗೆ ಬೆಂಕಿ ಹಚ್ಚಿದ್ದಾನೆ ಎಂದು ತಿಳಿಸಿದ್ದಾರೆ.

ನೋವಿನಿಂದ ಆಕೆ ಕಿರುಚಿಕೊಂಡಿದ್ದು, ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಂತರ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಯಲ್ಲಿಯೇ ಆಕೆ ಸಾವಿಗೀಡಾಗಿದ್ದಾರೆ. ಸಣ್ಣ ಸುಟ್ಟಗಾಯಗಳೊಂದಿಗೆ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com