ವಂದೇ ಭಾರತ್ ರೈಲಿಗೆ ಕಲ್ಲೆಸೆದದ್ದು ಬಂಗಾಳದಲ್ಲಿ ಅಲ್ಲ, ಬಿಹಾರದಲ್ಲಿ: ಮಮತಾ

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ನೆರೆಯ ಬಿಹಾರದಲ್ಲಿ ಕಲ್ಲು ಎಸೆಲಾಗಿದೆಯೇ ಹೊರತು ನಮ್ಮ ರಾಜ್ಯದಲ್ಲಿ ಅಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ
ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತಾ: ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ನೆರೆಯ ಬಿಹಾರದಲ್ಲಿ ಕಲ್ಲು ಎಸೆಲಾಗಿದೆಯೇ ಹೊರತು ನಮ್ಮ ರಾಜ್ಯದಲ್ಲಿ ಅಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ಘಟನೆಗಳು ನಡೆದಿದ್ದು ಎಂದು "ನಕಲಿ ಸುದ್ದಿ" ಹಬ್ಬಿಸಿ, , ರಾಜ್ಯಕ್ಕೆ ಕೆಟ್ಟ ಹೆಸರು ತರಲು ಯತ್ನಿಸಿದ ಮಾಧ್ಯಮಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ.

"ವಂದೇ ಭಾರತ್‌ಗೆ ಕಲ್ಲು ತೂರಿರುವುದು ಬಿಹಾರದಲ್ಲಿಯೇ ಹೊರತು ಪಶ್ಚಿಮ ಬಂಗಾಳದಲ್ಲಿ ಅಲ್ಲ. ಪಶ್ಚಿಮ ಬಂಗಾಳದಲ್ಲಿ ಘಟನೆ ನಡೆದಿದೆ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿ ನಮ್ಮ ರಾಜ್ಯಕ್ಕೆ ಕೆಟ್ಟ ಹೆಸರು ತಂದ ಮಾಧ್ಯಮಗಳ ವಿರುದ್ಧ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ" ಎಂದು ಮಮತಾ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ವಂದೇ ಭಾರತ್ ರೈಲಿನಲ್ಲಿ ವಿಶೇಷವೇನೂ ಇಲ್ಲ. ಇದು ಹೊಸ ಎಂಜಿನ್‌ನೊಂದಿಗೆ ನವೀಕರಿಸಿದ ಹಳೆಯ ರೈಲು" ಎಂದು ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಹೌರಾ-ನ್ಯೂ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಕೆಲವು ದಿನಗಳ ನಂತರ ಮಂಗಳವಾರ ಎರಡನೇ ಬಾರಿ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ರೈಲಿಗೆ ಕಲ್ಲು ಎಸೆದವರನ್ನು ಗುರುತಿಸಿರುವುದಾಗಿ ರೈಲ್ವೆ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಈ ಘಟನೆಯು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com