ಭೋಪಾಲ್‌: ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಅರಿವಳಿಕೆ ಮದ್ದು ಚುಚ್ಚಿಕೊಂಡು 24 ವರ್ಷದ ವೈದ್ಯೆ ಆತ್ಮಹತ್ಯೆ

ಭೋಪಾಲ್‌ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್‌ನಲ್ಲಿ 24 ವರ್ಷದ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಭೋಪಾಲ್: ಭೋಪಾಲ್‌ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್‌ನಲ್ಲಿ 24 ವರ್ಷದ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಆಕಾಂಶಾ ಮಹೇಶ್ವರಿ ಎಂದು ಗುರುತಿಸಲಾಗಿದ್ದು, ಬುಧವಾರ ಸಂಜೆ ಅವರ ಹಾಸ್ಟೆಲ್ ಕೋಣೆಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಆಕೆಯ ಕೊಠಡಿಯಿಂದ ಖಾಲಿ ಇಂಜೆಕ್ಷನ್ ಬಾಟಲುಗಳು ಮತ್ತು ಸಿರಿಂಜ್ ಅನ್ನು ವಶಪಡಿಸಿಕೊಂಡಿದ್ದಾರೆ. ಮಹಿಳೆಯು ತಲಾ 2.5 ಮಿಲಿಯ ನಾಲ್ಕು ಡೋಸ್ ಅರಿವಳಿಕೆಯನ್ನು ತೆಗೆದುಕೊಂಡಿದ್ದಾರೆ ಎಂದು ಕೋಹ್-ಇ-ಫಿಜಾ ಪೊಲೀಸ್ ಠಾಣೆಯ ಉಸ್ತುವಾರಿ ವಿಜಯ್ ಸಿಸೋಡಿಯಾ ಹೇಳಿದ್ದಾರೆ,

ತಾನು ಮಾನಸಿಕವಾಗಿ ಬಲಿಷ್ಠವಾಗಿಲ್ಲ ಮತ್ತು ಉದ್ವೇಗವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕೆ ಬರೆದಿಟ್ಟಿದ್ದ ಡೆತ್ ನೋಟ್ ಕೋಣೆಯಲ್ಲಿ ಪತ್ತೆಯಾಗಿದೆ.

ವೈಯಕ್ತಿಕ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮತ್ತು ಇದಕ್ಕೆ ಯಾರೂ ಜವಾಬ್ದಾರರಲ್ಲ. ಅಲ್ಲದೆ, ತಮ್ಮ ಪೋಷಕರಿಗೆ ಕ್ಷಮೆಯಾಚಿಸುತ್ತಿರುವುದಾಗಿ ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ ಎಂದು ಅವರು ಹೇಳಿದರು.

ಮಹೇಶ್ವರಿ ಅವರು ಸರ್ಕಾರಿ ಜಿಎಂಸಿಯಿಂದ ಪೀಡಿಯಾಟ್ರಿಕ್ಸ್ ಸ್ಟ್ರೀಮ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು ಮತ್ತು ಕೋರ್ಸ್‌ನ ಮೊದಲ ವರ್ಷದಲ್ಲಿದ್ದರು ಎಂದು ಅವರು ಹೇಳಿದರು.

ಹಾಸ್ಟೆಲ್‌ನಲ್ಲಿನ ಇತರ ವಿದ್ಯಾರ್ಥಿನಿಯರ ಪ್ರಕಾರ, ಬುಧವಾರ ಬೆಳಗ್ಗೆಯಿಂದಲೇ ಆಕೆಯ ಕೊಠಡಿಯ ಬಾಗಿಲು ಮುಚ್ಚಿತ್ತು. ಅವರು ಸಂಜೆ ಹಿಂತಿರುಗಿದಾಗಲೂ ಬಾಗಿಲು ಮುಚ್ಚಿರುವುದನ್ನು ಕಂಡು ಭದ್ರತಾ ಸಿಬ್ಬಂದಿ ಮತ್ತು ವೈದ್ಯಕೀಯ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಬಾಗಿಲು ತೆರೆದು ನೋಡಿದಾಗ ಕೋಣೆಯಲ್ಲಿ ಮಹಿಳೆ ಶವವಾಗಿ ಬಿದ್ದಿರುವುದು ಕಂಡು ಬಂದಿದೆ ಎಂದು ತಿಳಿಸಿದರು.

ಸಂತ್ರಸ್ತೆ ಗ್ವಾಲಿಯರ್ ನಿವಾಸಿಯಾಗಿದ್ದು, ಸುಮಾರು ಒಂದು ತಿಂಗಳ ಹಿಂದೆ ಜಿಎಂಸಿಗೆ ಸೇರಿದ್ದರು. ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಆಕೆ ತನ್ನ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದಳು.

ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com