ರಾಜ್‌ಕೋಟ್‌ನಲ್ಲಿರುವ ಡ್ಯಾಮ್‌ಗೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಹೆಸರು
ಗುಜರಾತ್‌ನ ರಾಜ್‌ಕೋಟ್ ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ಚೆಕ್‌ಡ್ಯಾಮ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ದಿವಂಗತ ಹೀರಾಬೆನ್ ಅವರ ಹೆಸರನ್ನು ಇಡಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
Published: 06th January 2023 04:40 PM | Last Updated: 06th January 2023 04:40 PM | A+A A-

ತಾಯಿ ಹೀರಾಬೆನ್ ಜೊತೆ ಪ್ರಧಾನಿ ನರೇಂದ್ರ ಮೋದಿ
ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್ ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ಚೆಕ್‌ಡ್ಯಾಮ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ದಿವಂಗತ ಹೀರಾಬೆನ್ ಅವರ ಹೆಸರನ್ನು ಇಡಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಗಿರ್ ಗಂಗಾ ಪರಿವಾರ ಟ್ರಸ್ಟ್, ರಾಜ್‌ಕೋಟ್-ಕಲವಾಡ ರಸ್ತೆಯ ವಗುಡಾದ್ ಗ್ರಾಮದ ಬಳಿ ನ್ಯಾರಿ ನದಿಗೆ ಅಡ್ಡವಾಗಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸುತ್ತಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ದಿಲೀಪ್ ಸಖಿಯಾ ಹೇಳಿದ್ದಾರೆ.
ಇದನ್ನು ಓದಿ: 'ಸೊಸೈಟಿಯ ಜನರ ಜೊತೆ ಸರಳವಾಗಿ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದ ಪ್ರಧಾನಿ ಮೋದಿ ತಾಯಿ ಹೀರಾಬೆನ್': ನೆರೆಹೊರೆಯವರ ಕಂಬನಿ
ಸ್ಥಳೀಯ ಶಾಸಕಿ ದರ್ಶಿತಾ ಶಾ ಮತ್ತು ರಾಜ್‌ಕೋಟ್ ಮೇಯರ್ ಪ್ರದೀಪ್ ದಾವ್ ಅವರ ಸಮ್ಮುಖದಲ್ಲಿ ಬುಧವಾರ ಅಣೆಕಟ್ಟಿನ ಶಿಲಾನ್ಯಾಸ ನೆರವೇರಿಸಲಾಯಿತು.
"ಪ್ರಧಾನಿ ಮೋದಿ ಅವರ ತಾಯಿಗೆ ಗೌರವಾರ್ಥವಾಗಿ ಈ ಚೆಕ್ ಡ್ಯಾಂಗೆ ಹೀರಾಬಾ ಸ್ಮೃತಿ ಸರೋವರ ಎಂದು ಹೆಸರಿಡಲು ನಾವು ನಿರ್ಧರಿಸಿದ್ದೇವೆ. ಏಕೆಂದರೆ ಇದನ್ನು ಅವರ ನೆನಪಿಗಾಗಿ ನಿರ್ಮಿಸಲಾಗುತ್ತಿದೆ. ಇದು ಇತರರಿಗೆ ಏನಾದರೂ ಮಾಡಲು ಅಥವಾ ಅವರ ಮರಣದ ನಂತರ ಒಳ್ಳೆಯ ಉದ್ದೇಶಕ್ಕಾಗಿ ದೇಣಿಗೆ ನೀಡಲು ಪ್ರೇರೇಪಿಸುತ್ತದೆ ಎಂದು" ಸಖಿಯಾ ಹೇಳಿದ್ದಾರೆ.
ಹೀರಾಬೆನ್ ಅವರು ಡಿಸೆಂಬರ್ 30 ರಂದು ಅಹಮದಾಬಾದ್‌ನ ಆಸ್ಪತ್ರೆಯಲ್ಲಿ 99 ನೇ ವಯಸ್ಸಿನಲ್ಲಿ ನಿಧನರಾದರು.