ಕಾಂಜಾವಾಲಾ ಅಪಘಾತ ಪ್ರಕರಣ: 6ನೇ ಆರೋಪಿ ಕಾರಿನ ಮಾಲೀಕ ಬಂಧನ

ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಆರೋಪಿ ಆಶುತೋಷ್
ಬಂಧಿತ ಆರೋಪಿ ಆಶುತೋಷ್
Updated on

ನವದೆಹಲಿ: ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಕಾರಿನ ಮಾಲೀಕನಾಗಿರುವ ಆಶುತೋಷ್ ಎಂಬಾತನನ್ನು ದೆಹಲಿ ಪೊಲೀಸರು ಇಂದು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಪ್ರಕರಣ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಭಾಗಿಯಾಗಿದ್ದಾರೆಂದು ಹೇಳಿದ್ದರು.

ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬುವವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದರು.

"ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಬಳಿ ಈ ಬಗ್ಗೆ ಸಾಕ್ಷ್ಯಾಧಾರಗಳಿವೆ. ಅಪರಾಧವೊಂದನ್ನು ಎಸಗಿ ಅದನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಬಂಧನದಲ್ಲಿರುವ ಆರೋಪಿಗಳನ್ನೂ ರಕ್ಷಿಸಲು ಪ್ರಯತ್ನ ನಡೆಸುತ್ತಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್‌ಪ್ರೀತ್ ಹೂಡಾ ಅವರು ಹೇಳಿದ್ದರು. ಇದರಂತೆ ಇದೀಗ ಓರ್ವ ಆರೋಪಿ ಆಶುತೋಷ್ ನನ್ನು ಬಂಧನಕ್ಕೊಳಪಡಿಸಿದ್ದಾರೆ.

ದೆಹಲಿಯ ಹೊರಭಾಗದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹಲವು ಕಿಲೋಮೀಟರ್‌ಗಳವರೆಗೆ ಮಹಿಳೆಯ ದೇಹ ಎಳೆದೊಯ್ದು ಹತ್ಯೆಗೀಡಾದ 20ರ ಹರೆಯದ ಮಹಿಳೆಯ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com