ಕೋವಿಡ್-19: ಕಳೆದ 24 ಗಂಟೆಗಳಲ್ಲಿ 214 ಹೊಸ ಸೋಂಕು ಪ್ರಕರಣ, ನಾಲ್ವರು ಸಾವು

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 214 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,509ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 214 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,509ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,79,761 ಕ್ಕೆ ಏರಿಕೆಯಾಗಿದೆ. ಇಂದು ನಾಲ್ಕು ಮಂದಿ ಸಾವಿಗೀಡಾಗಿರುವುದು ಸೇರಿದಂತೆ ಈವರೆಗೆ 5,30,718 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಮುಂಜಾನೆ 8ಗಂಟೆಗೆ ಲಭ್ಯವಾದ ಮಾಹಿತಿ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 0.11ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.12ರಷ್ಟಿದೆ. ದೈನಂದಿನ ಮರಣ ಪ್ರಮಾಣ 1.19 ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80 ರಷ್ಟಿದೆ. ಈವರೆಗೆ ಕೋವಿಡ್‌ನಿಂದ 4,41,46,534 ಮಂದಿ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.13 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com