ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ: ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ
ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ದೆಹಲಿ ಪಟಿಯಾಲ ಹೌಸ್ ಕೋರ್ಟ್...
Published: 07th January 2023 05:26 PM | Last Updated: 07th January 2023 06:59 PM | A+A A-

ಶಂಕರ್ ಮಿಶ್ರಾ
ನವದೆಹಲಿ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ದೆಹಲಿ ಪಟಿಯಾಲ ಹೌಸ್ ಕೋರ್ಟ್ ಶನಿವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಶಂಕರ್ ಮಿಶ್ರಾರನ್ನು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಬಂಧಿಸಿದ ದೆಹಲಿ ಪೊಲೀಸರು, ಮಧ್ಯಾಹ್ನ ದೆಹಲಿಗೆ ಕರೆದೊಯ್ದು ಪಟಿಯಾಲ ಹೌಸ್ ಕೋರ್ಟ್ ಮುಂದೆ ಹಾಜರುಪಡಿಸಿದರು. ಅಲ್ಲದೆ ಆರೋಪಿಯನ್ನು ಮೂರು ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದರು.
ಇದನ್ನು ಓದಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ; ಬೆಂಗಳೂರಿನಲ್ಲಿ ಆರೋಪಿ ಬಂಧನ ಹೇಗಾಯಿತು!
ದೆಹಲಿ ಪೊಲೀಸರ ಮನವಿ ತಿರಸ್ಕರಿಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಅನಾಮಿಕಾ ಅವರು, ಆರೋಪಿ ಶಂಕರ್ ಮಿಶ್ರಾ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳೆದ ವರ್ಷ ನವೆಂಬರ್ 26 ರಂದು ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ-ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಶಂಕರ್ ಮಿಶ್ರಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.