ಜೈರಾಂ ರಮೇಶ್
ಜೈರಾಂ ರಮೇಶ್

ಭಾರತ್ ಜೋಡೋ ಯಾತ್ರೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲು ಅಲ್ಲ: ಜೈರಾಮ್ ರಮೇಶ್

2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು 'ಭಾರತ್ ಜೋಡೋ ಯಾತ್ರೆ' ನಡೆಸುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಶನಿವಾರ ಹೇಳಿದ್ದಾರೆ.

ಕರ್ನಾಲ್: 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು 'ಭಾರತ್ ಜೋಡೋ ಯಾತ್ರೆ' ನಡೆಸುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಶನಿವಾರ ಹೇಳಿದ್ದಾರೆ.

"ಈ ಭಾರತ್ ಜೋಡೋ ಯಾತ್ರೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲು ಅಲ್ಲ. ಇದು ಸೈದ್ಧಾಂತಿಕ ಯಾತ್ರೆಯಾಗಿದ್ದು, ರಾಹುಲ್ ಗಾಂಧಿ ಇದರ ನೇತೃತ್ವ ವಹಿಸಿದ್ದಾರೆ. ಇದು ಒಬ್ಬ ವ್ಯಕ್ತಿಯ ಯಾತ್ರೆ ಅಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಪ್ರಸ್ತುತ ಹರಿಯಾಣದ ಕರ್ನಾಲ್ ಮೂಲಕ ಸಾಗುತ್ತಿರುವ ‘ಕನ್ಯಾಕುಮಾರಿ ಟು ಕಾಶ್ಮೀರ’ ಪಾದಯಾತ್ರೆ ಚುನಾವಣಾ ಯಾತ್ರೆಯಲ್ಲ ಎಂದು ಕಾಂಗ್ರೆಸ್ ನಾಯಕ ಪ್ರತಿಪಾದಿಸಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ ಮತ್ತು ರಾಜಕೀಯ ನಿರಂಕುಶಾಧಿಕಾರದಂತಹ ಮೂರು ದೊಡ್ಡ ಸಮಸ್ಯೆಗಳನ್ನು ಎತ್ತಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com