ಸಿಜೆಐ ಚಂದ್ರಚೂಡ್ ಗೆ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್‌ನಿಂದ 'ಜಾಗತಿಕ ನಾಯಕತ್ವ ಪ್ರಶಸ್ತಿ'
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ದೇಶ ಮತ್ತು ವಿಶ್ವದಾದ್ಯಂತ ವಕೀಲ ವೃತ್ತಿಗೆ ಸಲ್ಲಿಸಿದ ಜೀವಮಾನದ ಸೇವೆಯನ್ನು ಗುರುತಿಸಿ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್ ಅವರನ್ನು "ಜಾಗತಿಕ ನಾಯಕತ್ವಕ್ಕಾಗಿ...
Published: 07th January 2023 08:31 PM | Last Updated: 09th January 2023 11:20 AM | A+A A-

ಡಿವೈ ಚಂದ್ರಚೂಡ್
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ದೇಶ ಮತ್ತು ವಿಶ್ವದಾದ್ಯಂತ ವಕೀಲ ವೃತ್ತಿಗೆ ಸಲ್ಲಿಸಿದ ಜೀವಮಾನದ ಸೇವೆಯನ್ನು ಗುರುತಿಸಿ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್ ಅವರನ್ನು "ಜಾಗತಿಕ ನಾಯಕತ್ವ ಪ್ರಶಸ್ತಿ"ಗೆ ಆಯ್ಕೆ ಮಾಡಿದೆ.
ಜನವರಿ 11 ರಂದು ಆನ್‌ಲೈನ್ ಮೂಲಕ ನಡೆಯುವ ಸಮಾರಂಭದಲ್ಲಿ ಸಿಜೆಐ ಚಂದ್ರಚೂಡ್ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಇದನ್ನು ಓದಿ: ಸಾವಿರಾರು ಜನರನ್ನು ರಾತ್ರೋರಾತ್ರಿ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ: ಉತ್ತರಾಖಂಡದಲ್ಲಿ ಒತ್ತುವರಿ ತೆರವಿಗೆ ಸುಪ್ರೀಂ ಕೋರ್ಟ್ ತಡೆ
ಚಂದ್ರಚೂಡ್ ಅವರು ಯುನೈಟೆಡ್ ಸ್ಟೇಟ್ಸ್‌ನ ಹಾರ್ವರ್ಡ್ ಲಾ ಸ್ಕೂಲ್‌ನಿಂದ ಎಲ್ಎಲ್ಎಂ ಪದವಿ ಮತ್ತು ನ್ಯಾಯಾಂಗ ವಿಜ್ಞಾನದಲ್ಲಿ(SJD) ಡಾಕ್ಟರೇಟ್ ಪಡೆದಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್ ನ ಪ್ರೊಫೆಸರ್ ಡೇವಿಡ್ ವಿಲ್ಕಿನ್ಸ್ ಅವರು ಸಿಜೆಐ ಚಂದ್ರಚೂಡ್ ಅವರ ಜೊತೆ ಸಂವಾದ ನಡೆಸಲಿದ್ದಾರೆ.
ಅಯೋಧ್ಯೆ ಭೂ ವಿವಾದ ಪ್ರಕರಣ ಸೇರಿದಂತೆ ಹಲವು ಮಹತ್ವದ ತೀರ್ಪುಗಳನ್ನು ನೀಡಿದ ಸುಪ್ರೀಂ ಕೋರ್ಟ್ ಪೀಠಗಳ ಭಾಗವಾಗಿದ್ದ ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9, 2022 ರಂದು ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.