ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ; ಬೆಂಗಳೂರಿನಲ್ಲಿ ಆರೋಪಿಯ ಬಂಧನ

ಕಳೆದ ವರ್ಷ ನವೆಂಬರ್ 26ರಂದು ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ಎಂಬಾತನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಶನಿವಾರ ಬಂಧಿಸಿದ್ದಾರೆ.
ಆರೋಪಿ ಶಂಕರ್ ಮಿಶ್ರಾ
ಆರೋಪಿ ಶಂಕರ್ ಮಿಶ್ರಾ

ಬೆಂಗಳೂರು: ಕಳೆದ ವರ್ಷ ನವೆಂಬರ್ 26ರಂದು ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ಎಂಬಾತನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಶನಿವಾರ ಬಂಧಿಸಿದ್ದಾರೆ.

ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಹ-ಪ್ರಯಾಣಿಕರಾದ ವೃದ್ಧ ಮಹಿಳೆ  ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಎಂಬ ವ್ಯಕ್ತಿಯನ್ನು ಹುಡುಕಿಕೊಂಡು ದೆಹಲಿ ಪೊಲೀಸರ ತಂಡ ಶುಕ್ರವಾರವೇ ಬೆಂಗಳೂರಿಗೆ ಬಂದಿಳಿದಿತ್ತು.

ಆರೋಪಿಯನ್ನು ಬಂಧಿಸಲು ದೆಹಲಿ ಪೊಲೀಸರಿಗೆ ನಾವು ಸಹಾಯ ಮಾಡಿದ್ದೇವೆ. ಆತನನ್ನು ಹಿಡಿದುಕೊಳ್ಳಳಾಗಿದೆ. ಆದರೆ, ಔಪಚಾರಿಕವಾಗಿ ಬಂಧಿಸಲಾಗಿದೆಯೇ ಎಂಬುದು ನಮಗೆ ತಿಳಿದಿಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಆರೋಪಿಯನ್ನು ಸಂಜಯ್‌ ನಗರ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಿಶ್ರಾ ಅವರು ಕ್ಯಾಲಿಫೋರ್ನಿಯಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಅಮೆರಿಕದ ಬಹುರಾಷ್ಟ್ರೀಯ ಹಣಕಾಸು ಸೇವೆಗಳ ಕಂಪನಿಯಾದ ವೆಲ್ಸ್ ಫಾರ್ಗೋದ ಇಂಡಿಯಾ ಚಾಪ್ಟರ್‌ನ ಉಪಾಧ್ಯಕ್ಷರಾಗಿದ್ದರು. ವೆಲ್ಸ್ ಫಾರ್ಗೋ ಬೆಳ್ಳಂದೂರಿನಲ್ಲಿ ಕಚೇರಿಯನ್ನು ಹೊಂದಿದ್ದು, ಮಿಶ್ರಾ ಆಗಾಗ್ಗೆ ಭೇಟಿ ನೀಡುತ್ತಿದ್ದರು.

ಮೂಲಗಳ ಪ್ರಕಾರ, ಮಿಶ್ರಾ ಅವರು ನಗರದಲ್ಲಿ ಸಂಬಂಧಿಕರನ್ನು ಹೊಂದಿದ್ದು, ಅವರ ಸಂಬಂಧಿಕರೊಂದಿಗೆ ಇಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ದೆಹಲಿಯಿಂದ ಮತ್ತೊಂದು ಪೊಲೀಸ್ ತಂಡ ಮುಂಬೈಗೆ ತೆರಳಿದ್ದು, ಅಲ್ಲಿ ನೆಲೆಸಿರುವ ಆತನ ತಂದೆ ಶ್ಯಾಮ್ ಮಿಶ್ರಾ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಶಂಕರ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು.

ದೆಹಲಿ ಪೊಲೀಸರು ಮಿಶ್ರಾ ವಿರುದ್ಧ ಸೆಕ್ಷನ್ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಕೃತ್ಯ), 354 (ಮಹಿಳೆ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಪ್ರಕರಣ), 509, ಮತ್ತು ಐಪಿಸಿಯ 510 (ಮದ್ಯ ಸೇವಿಸಿದ ವ್ಯಕ್ತಿಯಿಂದ ಸಾರ್ವಜನಿಕವಾಗಿ ದುರ್ವರ್ತನೆ) ಹಾಗೂ ವಿಮಾನ ನಿಯಮಗಳ ಅಡಿಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೇಶ ತೊರೆಯದಂತೆ ಪೊಲೀಸರು ‘ಲುಕ್ ಔಟ್ ಸುತ್ತೋಲೆ’ ಕೂಡ ಹೊರಡಿಸಿದ್ದರು.

ಈಮಧ್ಯೆ, ಗುರುವಾರ ವೆಲ್ಸ್ ಫಾರ್ಗೋ ಮಿಶ್ರಾ ಅವರನ್ನು ಕೆಲಸದಿಂದ ವಜಾಗೊಳಿಸಿದೆ. 'ಕಂಪನಿಯು ತನ್ನ ಉದ್ಯೋಗಿಗಳಿಂದ ವೃತ್ತಿಪರ ಮತ್ತು ವೈಯಕ್ತಿಕ ಉತ್ತಮ ನಡವಳಿಕೆಯನ್ನು ಬಯಸುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತದೆ' ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com